ನಟ ಕೋಮಲ್ ಕುಮಾರ್ ಅವರು ಖಳನಟ ವಜ್ರಮುನಿ ಅವಾತಾರದಲ್ಲಿ ಕಾಣಿಸಿಕೊಂಡಿರುವ ಗೆಟಪ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಹೇಶ್ ಗೌಡ ನಿರ್ಮಿಸಿ ಎನ್ ಆರ್ ಪ್ರದೀಪ್ ಕಥೆ, ನಿರ್ದೇಶಿಸುತ್ತಿರುವ “ಯಲಾ ಕುನ್ನಿ” ಚಿತ್ರದ ಫಸ್ಟ್ ಲುಕ್ ನಟ ಕೋಮಲ್ ಕುಮಾರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ.
ಕೋಮಲ್ , ಹಿರಿಯ ನಟ ವಜ್ರಮುನಿ ಅವರ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಫಸ್ಟ್ ಲುಕ್ ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. ಫಸ್ಟ್ ಲುಕ್ ಗೆ ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರರಂಗದ ಗಣ್ಯರು ಫಸ್ಟ್ ಲುಕನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.
“ಯಲಾಕುನ್ನಿ” ಚಿತ್ರದಲ್ಲಿ ಕೋಮಲ್ ಬಹುಭಾಗ ವಜ್ರಮುನಿ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. “ಮೇರಾ ನಾಮ್ ವಜ್ರಮುನಿ ” ಎಂಬ ಅಡಿಬರಹ ಹಾಗೂ “ನರಕ ತುಂಬಿ ಮರಳಿ ಬಂದ ರಾಮನ ಗುಣದ ರಾವಣ” ಎಂಬ ಬರಹದೊಂದಿಗೆ “ಯಲಾಕುನ್ನಿ” ಚಿತ್ರ ಬರಲಿದೆ. ನವರಸ ನಾಯಕ ಜಗ್ಗೇಶ್ ಮಗ “ಯತಿರಾಜ್” ಮತ್ತು ವಜ್ರಮುನಿ ಅವರ ಮೊಮ್ಮಗ ಆಕರ್ಶ್ ಕೂಡ ಚಿತ್ರದಲ್ಲಿ ಅಭಿನಯಿಸುತ್ತಿರುವುದು ವಿಶೇಷ.