ಯಲ್ಲಪ್ಪ-ಸುರೇಶ್ ಬೆಂಬಲಿಗರು ಕೈ ಸೇರ್ಪಡೆ

ಬೆಂಗಳೂರು,ಏ.೧೮:ಮಹದೇವಪುರ ವಿಧಾನಸಭಾ ಕ್ಷೇತ್ರದ ಗರುಡಾಚಾರ್ಯ ಪಾಳ್ಯ ವಾರ್ಡಿನ ಕಾವೇರಿ ನಗರದ ಹಿರಿಯ ಕಾಂಗ್ರೆಸ್ ಮುಖಂಡ ಯಲ್ಲಪ್ಪ, ಸುರೇಶ್ ಬೆಂಬಲಿಗರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್, ಶಾಸಕ ರಿಜ್ವಾನ್ ಅರ್ಷದ್, ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಂದಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಲ್ಲೂರಹಳ್ಳಿ ನಾಗೇಶ್, ಕಮಾಲಾಕ್ಷಿ ರಾಜಣ್ಣ, ಕೆಪಿಸಿಸಿ ಸಂಯೋಜಕ ಗಫಾರ್‌ಬೇಗ್, ಶಂಕರ್‌ರೆಡ್ಡಿ, ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ಅನಿಲ್‌ಕುಮಾರ್ ಇತರರು ಇದ್ದರು.
ಇದೇ ವೇಳೆ ಹಿರಿಯ ಕಾಂಗ್ರೆಸ್ ಮುಖಂಡ ರೂಪ್‌ಸಿಂಗ್ ಅವರನ್ನು ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.