
ಇಂಡಿ:ಮೇ.18: ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಸಚಿವ ಸ್ಥಾನ,ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಲಾಳಸಂಗಿ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ ಮಲಘಾಣ ಪ್ರಕಟಣೆಯಲ್ಲಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿಕೊಂಡಿದ್ದಾರೆ.
ಸವದಿ ಹಾಗೂ ಯಶವಂತರಾಯಗೌಡ ಪಾಟೀಲ ಅವರು ಸ್ವಾರ್ಥ ರಾಜಕಾರಣಿಯಲ್ಲಿ ಜೀವನದುದ್ದಕ್ಕೂ ಅಭಿವೃದ್ದಿ ಪರ ಚಿಂತನೆಯನ್ನು ಹೊಂದಿರುವ ಮುತ್ಸದ್ದಿ ರಾಜಕಾರಣಿ ಆಗಿದ್ದಾರೆ.ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಲು ಇರ್ವರು ತಮ್ಮ ಜಿಲ್ಲೆಯಲ್ಲಿ ಶ್ರಮಿಸಿದ್ದಾರೆ. ಮೂರು ಬಾರಿ ಶಾಸಕರಾಗಿ ಹ್ಯಾಟ್ರೀಕ್ ಗೆಲುವು ಸಾ„ಸಿರುವ ಯಶವಂತರಾಯಗೌಡ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಿ ಕ್ಷೇತ್ರದ ಅಭಿವೃದ್ದಿಗೆ ಶಕ್ತಿ ತುಂಬಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.