ಯಶವಂತ ನಗರ ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ


ಸಂಜೆವಾಣಿ ವಾರ್ತೆ
ಸಂಡೂರು:ಅ:7:   ತಾಲೂಕಿನ ಯಶವಂತನಗರ ಗ್ರಾಮಪಂಚಾಯಿತಿ ನೂತನ ಅಧ್ಯಕ್ಷರಾಗಿ ವೀಣಾಪರಶುರಾಮ ಇವರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಾದ ಡಾ ವಲಿಭಾಷಾ ಘೋಷಿಸಿದರು.
ಯಶವಂತನಗರ ಗ್ರಾಮ ಪಮಚಾಯಿತಿ 2ನೇ ಅವಧಿಗೆ ಅಧ್ಯಕ್ಷ ಹುದ್ದೆಗೆ ವೀಣಾಪರಶುರಾಮ ಅವರು ಹಾಗೂ ಉಪಾಧ್ಯಕ್ಷರಾಗಿ ಡಿ.ಹೊನ್ನೂರಅಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಎಂದು ಘೋಷಿಸಿದರು.
ಅಧ್ಯಕ್ಷ ಹುದ್ದೆಯು ಅನುಸೂಚಿತ ಜಾತಿ ಮಹಿಳೆ ಮೀಸಲಾತಿ, ಉಪಾಧ್ಯಕ್ಷ ಹುದ್ದೆಗೆ ಸಾಮಾನ್ಯ  ನಿರ್ಧರಿತವಾಗಿತ್ತು, ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಹುದ್ದೆಗೆ ಸ್ಪರ್ಧೆಯು ಇಲ್ಲದೆ ಅವಿರೋಧವಾಗಿ ಆಯ್ಕೆಯಾದರೆ ಉಪಾಧ್ಯಕ್ಷ ಹುದ್ದೆಯು ಸಹ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯಿತಿ  ಅಭಿವೃದ್ದಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಗ್ರಾಮಪಂಚಾಯಿತಿ ಸದಸ್ಯರು, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಚುನಾವಣಾಧಿಕಾರಿ ಡಾ.ವಲೀಭಾಷಾ ಉಪಸ್ಥಿತರಿದ್ದರು.