ಯಶಸ್ವಿಯಾದ ಕಲಾಕುಂಚದ ಯುಗಾದಿ ಹಬ್ಬದ ಉಚಿತ ರಂಗೋಲಿ ಸ್ಪರ್ಧೆ

ದಾವಣಗೆರೆ.ಮಾ.೨೩; ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಚಾಂದ್ರಮಾನ ಯುಗಾದಿ ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾದ “ಮನೆಯಂಗಳದಲ್ಲಿ ಉಚಿತ ರಂಗೋಲಿ ಸ್ಪರ್ಧೆ”ಯು ಅತ್ಯಂತ ಯಶಸ್ವಿಯಾಗಿ ನೆರವೇರಿತು ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಡಾವಣೆಗಳಲ್ಲಿ ಮಹಿಳೆಯರೂ ಸೇರಿದಂತೆ ಪುರುಷರೂ, ಮಕ್ಕಳೂ ಭಾಗವಹಿಸಿ ಅತ್ಯಾಕರ್ಷಕವಾಗಿ ರಂಗೋಲಿಯನ್ನು ಬಿಡಿಸಿದ್ದು ನಮ್ಮ ನಾಡು, ನುಡಿ, ಸಾಂಪ್ರಾದಾಯಿಕ ಕಲಾ ಪ್ರಕಾರಗಳನ್ನು ವೈಭವೀಕರಿಸುವ, ಉಳಿಸುವ, ಬೆಳೆಸುವ ನಿಟ್ಟಿನಲ್ಲಿ ಏರ್ಪಡಿಸಲಾದ ಈ ವೈಶಿಷ್ಟಪೂರ್ಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮಾ. 26 ನೇ ಭಾನುವಾರ ಸಂಜೆ 5 ಗಂಟೆಗೆ ನಗರದ ಪ್ರವಾಸಿ ಮಂದಿರದ ರಸ್ತೆಯಲ್ಲಿರುವ ರೋಟರಿ ಬಾಲಭವನದ ಮೊದಲನೇ ಮಹಡಿಯ ಸಭಾಂಗಣದಲ್ಲಿ ನಡೆಯಲಿರುವ ಕಲಾಕುಂಚದ ಸಮಾರಂಭದಲ್ಲಿ ಬಹುಮಾನ, ಪ್ರಮಾಣಪತ್ರ ವಿತರಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್ ತಿಳಿಸಿದ್ದಾರೆ.