ಯಶಸ್ವಿ ಮಾತುಕತೆ: ತೋಮರ್ ವಿಶ್ವಾಸ

ನವದೆಹಲಿ, ಜ.8- ರೈತರು ಮತ್ತು ರೈತ ನಾಯಕರೊಂದಿಗೆ ಇಂದು ನಡೆಯಲಿರುವ ಮಾತುಕತೆ ಫಲಪ್ರದವಾಗಿದ್ದು ವಿಶ್ವಾಸವಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ರೈತರರೊಂದಿಗೆ ಮಾತುಕತೆಗೂ ನಡೆಸುವ ಮುನ್ನ ನರೇಂದ್ರ ಸಿಂಗ್ ತೋಮರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ ಈ ವಿಷಯ ತಿಳಿಸಿದ್ದಾರೆ.

ರೈತರೊಂದಿಗೆ ಮಾತುಕತೆ ನಡೆಸುವ ಹಿನ್ನೆಲೆಯಲ್ಲಿ ಇಂದಿನ ಮಾತುಕತೆ ಯಶಸ್ವಿಯಾಗಲಿದೆ. ರೈತ ನಾಯಕರಿಗೂ ಸಮ್ಮತಿಸುವ ನಿರ್ಧಾರ ಕೈಗೊಳ್ಳುವ ವಿಶ್ವಾಸ ಹೊರಹಾಕಿದ್ದಾರೆ.

ಕೃಷಿ ಕಾಯ್ದೆಗಳಿಂದ ರೈತರಿಗೆ ಅನುಕೂಲವಿದೆ ಈ ವಿಷಯವನ್ನು ಅವರಿಗೆ ಮತ್ತೊಮ್ಮೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.

ನೂತನ ಕೃಷಿ ಕಾಯ್ದೆಗಳಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಗೆ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆಗೆ ಯಾವುದೇ ಧಕ್ಕೆಯಾಗುವುದಿಲ್ಲ ಎನ್ನುವುದನ್ನು ರೈತರ ಸಮುದಾಯ ಅರ್ಥಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ