ಯಶಸ್ಸಿನ ಖುಷಿಯಲ್ಲಿ `ಯುವ’

ಯುವ ರಾಜ್‍ಕುಮಾರ್ ಚೊಚ್ಚಲ ಅಭಿನಯದ ‘ಯುವ” ಚಿತ್ರ ಯಶಸ್ಸು ಗಳಿಸಿದೆ. ಇದು ಸಹಜವಾಗಿ ಹೊಂಬಾಳೆ ಫಿಲ್ಮ್ಸ್ ಮತ್ತು  ಕಲಾವಿದರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಸಂತೋಷ್ ಹಂಚಿಕೊಳ್ಳಲು ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತವರ ತಂಡ ಮಾದ್ಯಮದ ಮುಂದೆ ಹಾಜರಾಗಿತ್ತು. ಈ ವೇಳೆ  ನಿರ್ದೇಶಕ ಸಂತೋಷ್ ಆನಂದ್ ರಾಮ್ ರಾಜ್ಯದ ಜನತೆ “ಯುವ” ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಖುಷಿಯ ಸಂಗತಿ ಎಂದರು.

ನಾಯಕ ಯುವ ರಾಜಕುಮಾರ್ ಮೊದಲ ಚಿತ್ರದಲ್ಲಿ ನನ್ನಿಂದೇನಾದರೂ ಸಣ್ಣಪುಟ್ಟ ತಪ್ಪಾಗಿದ್ದರೆ ಮುಂದಿನ ಚಿತ್ರಗಳಲ್ಲಿ ಸರಿ ಪಡಿಸಿಕೊಳ್ಳುತ್ತೇನೆ. ಜನ ಫ್ಯಾಮಿಲಿ ಸಮೇತ ಬಂದು ಚಿತ್ರ ನೋಡುತ್ತಿರುವುದು ಮೊದಲ ಬಾರಿಗೆ ನಾಯಕನಾದವನಿಗೆ ಸಂತಸ ತರಿಸಿದೆ ಎಂದರು.

ರಾಘವೇಂದ್ರ ರಾಜ್ ಕುಮಾರ್ ಮಾತನಾಡಿ ಮಗನನ್ನು  ಒಂದು ಬ್ರಾಂಡ್ ಗೆ ಸೀಮಿತ ಮಾಡದೆ ಎ ಅವನಿಂದ ಎಲ್ಲಾ ರೀತಿಯ ನಟನೆಯನ್ನು ಮಾಡಿಸಿರುವ ನಿರ್ದೇಶಕ ಸಂತೋಷ್ ಆನಂದರಾಮ್ ಮತ್ತು ಹೊಂಬಾಳೆ ಸಂಸ್ಥೆಗೆ ಧನ್ಯವಾದ. ಯುವನ ಸಿನಿಮಾ ಹಾದಿ ಈಗಷ್ಟೇ ಆರಂಭವಾಗಿದೆ. ಮುಂದೆ ಬೇರೆಬೇರೆ ಪಾತ್ರಗಳಲ್ಲಿ ಅವನು ನಟಿಸಿ ಜನರಿಂದ ಸೈ ಎನಿಸಿಕೊಳ್ಳಬೇಕು ಎಂದು ತಿಳಿಸಿದರು.

ಒಳ್ಳೆಯ ಪಾತ್ರ ನೀಡಿದ್ದಕ್ಕೆ ನಾಯಕಿ ಸಪ್ತಮಿ ಗೌಡ ,ಅಚ್ಯುತಕುಮಾರ್, ಸುಧಾರಾಣಿ, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ರಾಘು ಶಿವಮೊಗ್ಗ ಹಾಗೂ ಛಾಯಾಗ್ರಾಹಕ ಶ್ರೀಶ ಕುದುವಳ್ಳಿ ಚಿತ್ರದ ಬಗ್ಗೆ ಸಂತಸ ಹಂಚಿಕೊಂಡರು.