ಯಶ, ಅಂಜಲಿ ಜೊತೆ ಸೇರಿದ ದಿವ್ಯ

ಪದವಿಪೂರ್ವ ಕ್ಕೆ ನಟಿ ’ದಿವ್ಯ ಉರುಡುಗ’ ಪ್ರವೇಶ ಪಡೆದುಕೊಂಡಿದ್ದಾರೆ. ಯೋಗರಾಜ್ ಭಟ್ ಹಾಗು ರವಿ ಶಾಮನೂರ್ ಜಂಟಿ ನಿರ್ಮಾಣದಲ್ಲಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ಚಿತ್ರಾದಲ್ಲಿ ದಿವ್ಯ ಅತಿಥಿ ಪಾತ್ರ ನಿರ್ವಹಿಸುತ್ತಿದ್ದಾರೆ.
ದಿವ್ಯ ನಟಿಸಲಿರುವ ಭಾಗದ ಚಿತ್ರೀಕರಣ ಬೆಂಗಳೂರು ಹಾಗು ಮಂಗಳೂರಿನ ಸುತ್ತಮುತ್ತ ಶೀಘ್ರದಲ್ಲೇ ಶುರು ಆಗಲಿದ್ದು, ಚಿತ್ರದ ಐದನೇ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಸಕಲ ಸಿದ್ಧತೆ ನಡೆಸಿದೆ.
ಚಿತ್ರದ ನಾಲ್ಕನೇ ಹಂತದ ಚಿತ್ರೀಕರಣ ಕಳೆದ ತಿಂಗಳಷ್ಷೇ ಪೂರ್ಣಗೊಂಡಿದ್ದು, ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಸಿದ ಚಿತ್ರೀಕರಣದ ದೃಶ್ಯಗಳು ಅತ್ಯಂತ ಸೊಗಸಾಗಿ ಮೂಡಿಬಂದಿದೆ ಎಂದು ಚಿತ್ರ ನಿರ್ದೇಶಕ ಹರಿಪ್ರಸಾದ್ ಜಯಣ್ಣ ಸಂತೋಷ ಹೇಳಿದ್ದಾರೆ.
ಹೊಸಬರೇ ಇರುವ ಚಿತ್ರದಲ್ಲಿ ಪೃಥ್ವಿ ಶಾಮನೂರು ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ.
ಪದವಿಪೂರ್ವ ಚಿತ್ರಕ್ಕಾಗಿ ಅರ್ಜುನ್ ಜನ್ಯ ಸಂಯೋಜಿಸಿರುವ ರಾಗಗಳಿಗೆ ಯೋಗರಾಜ್ ಭಟ್ ಸಾಹಿತ್ಯ ರಚಿಸಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ.