ಯಾದಗಿರಿ : ಜು.19: : ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಡಾ.ಸುಶೀಲಾ.ಬಿ ಅವರು ಇಂದು ಜುಲೈ 18 ಮಂಗಳವಾರ ರಂದು ಅಧಿಕಾರ ವಹಿಸಿಕೊಂಡಿದ್ದು, ಈ ಹಿಂದಿನ ಜಿಲ್ಲಾಧಿಕಾರಿಗಳಾಗಿದ್ದ ಶ್ರೀಮತಿ ಸ್ನೇಹಲ್.ಆರ್ ಅವರು ಅಧಿಕಾರ ಹಸ್ತಾಂತರಿಸಿದರು.
ನೂತನ ಜಿಲ್ಲಾಧಿಕಾರಿಗಳಾದ ಡಾ.ಸುಶೀಲಾ.ಬಿ ಅವರು ಮೂಲತಃ ತೆಲಂಗಾಣದ ನಿಜಾಮಬಾದ ಜಿಲ್ಲೆಯ ರಾಮಂದ್ರಪುರದವರಾದ ಇವರು 2015ರ ಕರ್ನಾಟಕ ಕೇಡರ್ ಐ.ಎ.ಎಸ್ ಅಧಿಕಾರಿಯಾಗಿದ್ದು, ವೈದ್ಯಕೀಯ ವೃತ್ತಿ ವ್ಯಾಸಂಗ ಮಾಡಿದ್ದಾರೆ.
ಅವರು ಈ ಹಿಂದೆ ಕೆಲಕಾಲ ಕೇಂದ್ರ ಸರ್ಕಾರದ ಅಂಗವಿಕಲರ ಕಲ್ಯಾಣ ಇಲಾಖೆಯಲ್ಲಿ ಸೇವೆಸಲ್ಲಿಸಿದ್ದು, ರಾಯಚೂರುನಲ್ಲಿ ಪ್ರೊಬೆಷನರಿ ಅಧಿಕಾರಿಗಳಾಗಿ, ಕಲಬುರಗಿ ಜಿಲ್ಲೆಯ ಸೇಡಂ ಉಪವಿಭಾಗದ ಸಹಾಯಕ ಆಯುಕ್ತರಾಗಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪಕಾರ್ಯದರ್ಶಿಯಾಗಿ, ಧಾರವಾಡ ಜಿಲ್ಲಾ ಪಂಚಾಯತ್ ಹಾಗೂ ಗದಗ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾಗಿ ಸೇವೆಸಲ್ಲಿಸಿದ್ದು, ಇದೀಗ ಯಾದಗಿರಿ ಜಿಲ್ಲಾಧಿಕಾರಿಗಳಾಗಿ ಅಧಿಕಾರಿ ವಹಿಸಿಕೊಂಡಿದ್ದಾರೆ.