ಯಾವುದೇ ಆಮಿಷಕ್ಕೊಳಗಾಗದೇ ಕಡ್ಡಾಯವಾಗಿ ಮತದಾನ ಮಾಡಿ :ಜಿ ಪಂ ಸಿಇಓ ರಾಹುಲ್ ಶಿಂಧೆ ಕರೆ

ವಿಜಯಪುರ:ಎ.7: ಪ್ರತಿಯೊಬ್ಬ ಅರ್ಹ ಮತದಾರರು ಸ್ವಯಂ ಪ್ರೇರಣೆಯಿಂದ ಮತದಾನಕ್ಕೆ ಮುಂದಾಗಬೇಕು. ತಮ್ಮ ಜವಾಬ್ದಾರಿಯನ್ನರಿತು, ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೇ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಕರೆ ನೀಡಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ, ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಜಿಲ್ಲಾ ಪಂಚಾಯಿತ್ ಸಭಾಭವನದಲ್ಲಿ ಲಿಂಗತ್ವ ಅಲ್ಪಸಂಖ್ಯಾತರರು (ಖಿಉ), ಧಮನಿತ ಮತ್ತು ಮಾಜಿ ದೇವದಾಸಿ ಮಹಿಳೆಯರಿಗೆ ಮತದಾನದ ಜಾಗೃತಿ ಮತ್ತು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವೀಪ್ ಕಾರ್ಯ ಚಟುವಟಿಕೆಗಳ ಮೂಲಕ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಗ್ರಾಮೀಣ, ಪಟ್ಟಣ, ತಾಲೂಕು, ನಗರ ಪ್ರದೇಶವೂ ಸೇರಿದಂತೆ ಎಲ್ಲ ಕಡೆಯಲ್ಲೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನದ ಜಾಗೃತಿ ಮೂಡಿಸಲಾಗುತ್ತಿದೆ. ಅದೇ ರಿತಿಯಾಗಿ ಇಂದು ವಿವಿಧ ಕಾರ್ಯ ಚಟುವಟಿಕೆಗಳಿಂದ ಲಿಂಗತ್ವ ಅಲ್ಪಸಂಖ್ಯಾತರರು (ಖಿಉ), ಧಮನಿತ ಮತ್ತು ಮಾಜಿ ದೇವದಾಸಿ ಮಹಿಳೆಯರಿಗೆ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು. 18 ವರ್ಷ ಮಯೋಮಾನದ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದು. ಇದೇ ಮೇ-10ರ ಬುಧವಾರ ರಂದು ಬರುವ ಪ್ರಜಾಪ್ರಭುತ್ವ ಹಬ್ಬದಲ್ಲಿ ಪ್ರತಿಯೊಬ್ಬ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಪ್ಪದೇ ಮತ ಚಲಾಯಿಸಿ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಹೇಳಿದರು.
ಪ್ರಜಾಪ್ರಭುತ್ವದ ಹಬ್ಬ “ಮತದಾನ” ದಿನವನ್ನು ಆಚರಿಸುವ ಮೂಲಕ ಚುನಾವಣೆಯ ಮತದಾನದ ಹಕ್ಕನ್ನು ಚಲಾಯಿಸಬೇಕು ಮತ್ತು ನಿಮ್ಮ ಅಕ್ಕ-ಪಕ್ಕದವರನ್ನು ಮನವೊಲಿಸಿ ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೂಲಿ ಕೆಲಸ ನಿರ್ವಹಿಸಲು ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ ಮಹಿಳೆಯರು, ವಿಶೇಷ ಚೇತನರು, ಹಿರಿಯ ನಾಗರಿಕರಿಗೂ ಅವಕಾಶ ಕಲ್ಪಿಸಲಾಗಿದೆ. ಒಂದು ಕುಟುಂಬಕ್ಕೆ 100 ದಿನಗಳ ಉದ್ಯೋಗ ನೀಡಲಾಗುವುದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಸ್ವ-ಸಹಾಯ ಸಂಘಗಳನ್ನು ರಚನೆ ಮಾಡಲಾಗಿದೆ, ಸಂಘಗಳಲ್ಲಿರುವ ಎಲ್ಲ ಮಹಿಳೆಯರು ಆದಾಯ ಉತ್ಪನ್ನ ಚಟುವಟಿಕೆಗಳಲ್ಲಿ ತೊಡಗಲು ಹಣಕಾಸಿನ ಸಾಲ, ರಿಯಾಯಿತಿ ಮತ್ತು ಸೌಲಭ್ಯಗಳನ್ನು ಒದಗಿಸಲಾಗುವುದು ಆದ್ದರಿಂದ ಈ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಸಶಕ್ತರಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಚುನಾವಣಾ ಆಯೋಗದ ಮತದಾನ ಜಾಗೃತಿ ವಿಡಿಯೋಗಳನ್ನು ಪ್ರದರ್ಶಿಸಲಾಯಿತು. ಮತದಾನ ಜಾಗೃತಿಯ ಘೋಷ ವಾಕ್ಯಗಳಾದ ‘ಮತದಾನ ನಮ್ಮ ಹಕ್ಕು’, ‘ಹೆಸರು ನೋಂದಾಯಿಸಲು ನಮೂನೆ 6 ಬಳಸಿ’, ‘ನೋಂದಾಯಿಸಿ ನೋಂದಾಯಿಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ನೋಂದಾಯಿಸಿ’, ‘ಬಳಸಿ ಬಳಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೊಂದಾಯಿಸಲು ಗಿಊಂ ಚಿಠಿಠಿ ಬಳಸಿ ‘ಖಚಿತಪಡಿಸಿ ಖಚಿತಪಡಿಸಿನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೆಂದು ಖಚಿತಪಡಿಸಿ’, ಪರಿಶೀಲಿಸಿ ಪರಿಶೀಲಿಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿ’ ಎಂಬ ಘೋಷವಾಕ್ಯಗಳನ್ನು ಕೂಗಿ ಹೇಳಲಾಯಿತು ಮತ್ತು ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಯೋಜನಾ ನಿರ್ದೇಶಕರಾದ ಸಿ. ಬಿ. ದೇವರಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ. ಕೆ. ಚವ್ಹಾಣ, ಜಿಲ್ಲಾ ವಿಕಲಚೇತನರ ಅಧಿಕಾರಿಗಳಾದ ರಾಜಶೇಖರ ದೈವಾಡಗಿ, ಜಿಲ್ಲಾ ಏಡ್ಸ್ ಮತ್ತು ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಎಮ್. ಬಿ. ಬಿರಾದಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ನಗರ) ಶ್ರೀಮತಿ ದೀಪಾಕ್ಷಿ ಜಾನಕಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಗ್ರಾಮೀಣ) ಎಸ್. ಸಿ. ಮ್ಯಾಗೇರಿ, ನವಸ್ಪೂರ್ತಿ ಸಂಘ(ರಿ)ದ ಅಧ್ಯಕ್ಷ ಇಸ್ಮಾಯಿಲ್ ಬಿದರಕೋಟಿ, ಏಡ್ಸ್ ಜಾಗೃತಿ ಮಹಿಳಾ ಸಂಘದ ಅಧ್ಯಕ್ಷರಾದ ಯಶೋಧಾ ಮೇಲಿನಕೇರಿ, ದೇವದಾಸಿ ಪುನರ್ವಸತಿ ಯೋಜನೆಯ ಯೋಜನಾಧಿಕಾರಿಗಳಾದ ಬಿ. ಆರ್. ಮಧುಸೂದನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.