ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗಲ್ಲ

ದಾವಣಗೆರೆ. ಜೂ.೧: ರಾಜ್ಯದ ಸಿಎಂ ಯಡಿಯೂರಪ್ಪ ಬದಲಾವಣೆಯಾಗುವುದಿಲ್ಲ ಎಂದು ದಾವಣಗೆರೆ  ಜಿಲ್ಲಾ  ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.ಹರಿಹರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇಂದು ಬಿ.ಎಸ್ ವೈ ಪುತ್ರ ವಿಜಯೇಂದ್ರ ದೆಹಲಿ ಭೇಟಿ ನೀಡಿರುವ ಕಾರಣ ಗೊತ್ತಿಲ್ಲ. ಅವರು ತಮ್ಮ ವೈಯಕ್ತಿಕ ಕಾರಣಕ್ಕೆ ದೆಹಲಿಗೆ ಹೋಗಿರಬಹುದು, ಆದರೆ ಮುಖ್ಯ ಮಂತ್ರಿ ಬದಲಾವಣೆ ಆಗಲ್ಲ. ಮುಂದಿನ ಚುನಾವಣೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.