ಯುಗಾದಿ ಪ್ರಯುಕ್ತ ಆಂಜನಾದ್ರಿಯಲ್ಲಿ ವಿಶೇಷ ಪೂಜೆ


ಸಂಜೆವಾಣಿ ವಾರ್ತೆ
ಗಂಗಾವತಿ, ಮಾ.23: ತಾಲೂಕಿನ ಹನುಮನ ಹಳ್ಳಿಯ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಯಿತು.
ಮುಜರಾಯಿ ದೇವಸ್ಥಾನಗಳಲ್ಲಿ ಯುಗಾದಿ ಹಬ್ಬದ ನಿಮಿತ್ತ ಎಲ್ಲಾ‌ ಎ ವರ್ಗದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಪರಣ್ಣ ಮುನವಳ್ಳಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು.ನಂತರ ಮಾತನಾಡಿದ ಶಾಸಕರು, ಗಂಗಾವತಿ ಕ್ಷೇತ್ರದ ಐತಿಹಾಸಿಕ ಪ್ರಸಿದ್ದಿ ಪಡೆದ ಆಂಜನಾದ್ರಿ ಬೆಟ್ಟದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಸರಕಾರದಿಂದ ವಿಶೇಷ ಪೂಜೆಯನ್ನು ಹಮ್ಮಕೊಳ್ಳಲಾಗಿದೆ. ಈ ಭಾಗದ ಪವಿತ್ರ ಕ್ಷೇತ್ರವಾಗಿದ್ದು, ಈ ದೇವಸ್ಥಾನದ ಅಭಿವೃದ್ಧಿಗೆ ಈಗಾಗಲೇ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, ಸಕಲ ಭಕ್ತರಿಗೆ ಮೂಲಭೂತ ಸೌಕರ್ಯ ನೀಡಿ ಅಭಿವೃದ್ಧಿಗೊಳಿಸಲಾಗುವುದು ಎಂದರು.  ಈ ಸಂದರ್ಭದಲ್ಲಿ ಹೊಸಪೇಟೆಯ ಅಂಜಲಿ ಇವರ ತಂಡದಿಂದ ಭರತನಾಟ್ಯ ಹಾಗೂ ಹುಲಿಗಿ ಗ್ರಾಮದ ಶೃತಿ ಹ್ಯಾಟಿ ಇವರಿಂದ ಭಕ್ತಿ ಗೀತೆಗಳು ಹಾಗೂ ಆನೆಗುಂದಿ ಗ್ರಾಮದ ಕು, ಸಂಜನಾ ಇವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ವೇಳೆ ಕಂದಾಯ ಇಲಾಖೆಯ ಅಧಿಕಾರಿಳಾದ ಮಂಜುನಾಥ ಹಿರೇಮಠ ಹಾಗೂ ದೇವಸ್ಥಾನದ ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಹಾಜರಿದ್ದರು