ಯುಜಿಸಿ-ನೆಟ್ ಪರೀಕ್ಷೆ ಮುಂದೂಡಿಕೆ

ನವದೆಹಲಿ, ಏ .20- ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ 2ರಿಂದ 17ಕ್ಕೆ ನಡೆಯಬೇಕಿದ್ದ ಯುಜಿಸಿ- ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಇಂದು

ಪ್ರಕಟಿಸಿದ್ದಾರೆ.

ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ತದನಂತರ ಪ್ರಕಟಿಸಲಾಗುವುದು, ಪರೀಕ್ಷೆಗಿಂತ ಕನಿಷ್ಠ 15 ದಿನ ಮುಂಚಿತವಾಗಿ ವಿಷಯ ತಿಳಿಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಆದೇಶದಲ್ಲಿ ತಿಳಿಸಿದೆ.

ಅಭ್ಯರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಯುಜಿಸಿ- ನೆಟ್ ಪರೀಕ್ಷೆಯನ್ನು ಮುಂದೂಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ಸಲಹೆ ನೀಡಿದ್ದಾಗಿ ನಿಶಾಂಕ್ ಟ್ವೀಟ್ ಮಾಡಿದ್ದಾರೆ.

ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿ ಹಾಗೂ ಅಭ್ಯರ್ಥಿಗಳ ಆರೋಗ್ಯ, ಸುರಕ್ಷತೆಯನ್ನು ನೋಡಿಕೊಂಡು, ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಆದೇಶದಲ್ಲಿ ತಿಳಿಸಿದೆ