ಯುವಕನಿಗೆ ಹಲ್ಲೆ: ಎಂಟು ಮಂದಿ ಸೆರೆ

ಸುಳ್ಯ, ಜು.೨೧- ಯುವಕನೋರ್ವನಿಗೆ ತಂಡವೊಂದು ಹಲ್ಲೆಗೈದಿರುವ ಘಟನೆ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಳಂಜ ಗ್ರಾಮದ ವಿಷ್ಣುನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ.
ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರು ನಿವಾಸಿ ಮಸೂದ್ (18) ಹಲ್ಲೆಗೊಳಗಾದ ಯುವಕ. ದುಷ್ಕರ್ಮಿಗಳು ಸೋಡಾ ಬಾಟಲಿಯಿಂದ ಹಲ್ಲೆಗೈದಿರುವುದರಿಂದ ಮಸೂದ್ ತಲೆಗೆ ಗಾಯವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಯ ಸಂದರ್ಭ ಮಸೂದ್ ಜತೆಗಿದ್ದ ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಪೆಲತ್ತಡ್ಕ ನಿವಾಸಿ ಇಬ್ರಾಹೀಂ ಶಾನಿಫ್ ಎಂಬವರು ನೀಡಿರುವ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಆರೋಪಿಗಳಾದ ಸುನೀಲ್, ಸುಧೀರ್, ಶಿವ, ಸದಾಶಿವ, ರಂಜಿತ್, ಅಭಿಲಾಷ್, ಜಿಮ್ ರಂಜಿತ್ ಹಾಗೂ ಭಾಸ್ಕರ ಎಂಬವರನ್ನು ಪೊಲೀಸರು ಬುಧವಾರ ಬಂಧಿ ಸಿದ್ದಾರೆ. ಇವರೆಲ್ಲರೂ ಸ್ಥಳೀಯ ನಿವಾಸಿಗಳಾಗಿದ್ದಾರೆ. ಇವರ ವಿರುದ್ಧ ಕಲಂ: ೧೪೩, ೧೪೭, ೩೨೩, ೩೨೪, ೩೦೭ ಜೊತೆಗೆ ೧೪೯ ಐಪಿಸಿ ಸೆಕ್ಷನ್‌ನಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸರು ಕೇಸು ದಾಖಲಿಸಿ ಕೊಂಡಿದ್ದಾರೆ.