ಯುವಕನ ಕೊಚ್ಚಿ ಕೊಲೆ

ಬೆಂಗಳೂರು,ಅ.30-ಬೈಕ್ ನಲ್ಲಿ ಹೋಗುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಅನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ಬಳಿ ನಡೆದಿದೆ.
ಬೆಸ್ತಮಾನಹಳ್ಳಿಯ ವೈ.ವಿನುತ್(25) ಕೊಲೆಯಾದವರು,ನಾಲ್ವರು ದುಷ್ಕರ್ಮಿಗಳು ಬೈಕ್ ನಲ್ಲಿ ಹೋಗುತ್ತಿದ್ದ ವಿನುತ್ ನನ್ನು ಶೆಟ್ಟಿಹಳ್ಳಿಯ ವೇರ್ ಹೌಸ್ ಬಳಿ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ನನ್ನು ಹತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.