ಯುವಕರ ಹತ್ಯೆ ಖಂಡಿಸಿ ಜಿಲ್ಲಾ ಕಾಂಗ್ರೆಸ್  ಪ್ರತಿಭಟನೆ

ದಾವಣಗೆರೆ. ಜು.೩೦; ರಾಜ್ಯದಲ್ಲಿ ನಡೆಯುತ್ತಿರುವ ಯುವಕರ ಸರಣಿ ಹತ್ಯೆಯನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾದ ಎಚ್.ಬಿ ಮಂಜಪ್ಪನವರ ನೇತೃತ್ವದಲ್ಲಿ ನಗರದ ಜಯದೇವ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಾರ್ವಜನಿಕರಿಗೆ ರಕ್ಷಣೆ ನೀಡದ ರಾಜ್ಯ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಮುಖಂಡರಾದ ದಿನೇಶ ಕೆ ಶೆಟ್ಟಿ,ಎ ನಾಗರಾಜ್, ಮಂಜುನಾಥ್ ಗಡಿಗುಡಾಳ್,ಕೆ.ಜಿ ಶಿವಕುಮಾರ್,ಕೆ.ಎಲ್.ಹರೀಶ್ ಬಸಾಪುರ,ಮಹಮ್ಮದ್ ಬಾಷಾ ಸೇರಿದಂತೆ ಹಲವಾರು ಕಾರ್ಯಕರ್ತರು ಇದ್ದರು.