ಯುವತಿಯ ಶವ ಪತ್ತೆ : ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ನ.9:- ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಘಟನೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗ ಇಂದು ಪ್ರತಿಭಟನೆ ನಡೆದಿದ್ದು, ಪಿರಿಯಾಪಟ್ಟಣದ ಕೆಲ್ಲೂರು ರಸ್ತೆಯಲ್ಲಿ ಉರಿಯುತ್ತಿರುವ ಸ್ಥಿತಿಯಲ್ಲಿ ಯುವತಿ ಪತ್ತೆಯಾಗಿದ್ದು ಖಂಡನೀಯ. ಕೊಲೆ ಮಾಡಿ ಬೆಂಕಿ ಹಚ್ಚಿರುವ ಶಂಕೆಯಿದೆ. ದಿನದಿಂದ ದಿನಕ್ಕೆ ಇಂತಹ ಪ್ರಕರಣಗಳು ಜಾಸ್ತಿಯಾಗುತ್ತಿದ್ದು ಮಹಿಳೆಯರಿಗೆ ಅಭದ್ರತೆ ಕಾಡುತ್ತಿದೆ. ಮಾಧ್ಯಮಗಳಲ್ಲಿ ಪ್ರಸಾರವಾಗುವ ಅಶ್ಲೀಲತೆ ಹಾಗೂ ಮಾದಕ ವಸ್ತುಗಳೇ ಇದಕ್ಕೆ ಕಾರಣ. ಕೂಡಲೇ ಇವೆಲ್ಲವನ್ನು ನಿಷೇಧಿಸಬೇಕು. ಈ ಕೃತ್ಯದ ಕುರಿತು ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.