ಯುವ ಉದ್ಯಮಿಗಳು ದೇಶವನ್ನು ಕಟ್ಟಬಲ್ಲರು

ಸಂಜೆವಾಣಿ ವಾರ್ತೆ
ದಾವಣಗೆರೆ. ಅ.೨೧; ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳು ತಮ್ಮ ಅಭಿರುಚಿಯನ್ನು ಉದ್ಯಮವನ್ನಾಗಿ ಮಾರ್ಪಡಿಸಿಕೊಂಡು ದೇಶದ ಅಭಿವೃದ್ಧಿಗೆ ಕಾರಣೀಭೂತರಾಗಬೇಕು. ಆಧುನಿಕ ಉದ್ಯಮಗಳಲ್ಲಿ ಕ್ರಿಯಾಶೀಲತೆಯು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ ಕ್ರಿಯಾಶೀಲ ಉದ್ಯಮಿಗಳು ಹೆಚ್ಚು ಹೆಚ್ಚು ಲಾಭವನ್ನು ಗಳಿಸುವುದಲ್ಲದೆ ದೇಶದ ಪ್ರಗತಿಗೆ ತಮ್ಮ ಕೊಡುಗೆಯನ್ನು ನೀಡಬಲ್ಲರು ಎಂದು ಲೋಕಸಭಾ ಟಿಕೇಟ್ ಆಕಾಂಕ್ಷಿ ವಿನಯ್ ಕುಮಾರ್ ಜಿ ಬಿ ಅವರು ಅಭಿಪ್ರಾಯಪಟ್ಟರು.ಅವರು ಚಾಣಕ್ಯ ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ  ಚಾಣಕ್ಯ ಪಾಕ ಪರಿಷೆ  ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಆಹಾರ ಮೇಳದಂತಹ ಕಾರ್ಯಕ್ರಮಗಳು ವಾಣಿಜ್ಯ ವಿದ್ಯಾರ್ಥಿಗಳಿಗೆ ಪಠ್ಯೇತರ ಪ್ರಾಯೋಗಿಕ ಅನುಭವಗಳನ್ನು ನೀಡುತ್ತವೆ ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯದಲ್ಲಿ ಉದ್ಯಮಿಗಳಾಗಲು ಮತ್ತು ತಮ್ಮನ್ನು ತಾವು ಮಾನಸಿಕವಾಗಿ ಸಿದ್ಧಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತವೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಈ ರೀತಿಯ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಹೇಳಿದರು.