ಯುವ ಕಾಂಗ್ರೆಸ್‌ನಿಂದ ೭೭ನೇ ಸ್ವತಂತ್ರೋತ್ಸವ ದಿನಾಚರಣೆ

ರಾಯಚೂರು,ಆ.೧೩-
೭೭ನೇ ಸ್ವತಂತ್ರೋತ್ಸವ ದಿನಾಚರಣೆ ನಿಮಿತ್ಯ ಆ ೧೫ ರಂದು ಮಹಿಳಾ ಸಬಲೀಕರಣದ ದ್ಯೇಯೋದ್ದೇಶದೊಂದಿಗೆ ಜಿಲ್ಲೆಯ ಎಲ್ಲಾ ಬ್ಲಾಕ್ ಮಟ್ಟದಲ್ಲಿ ’ಶಕ್ತಿ ಸೂಪರ್ ಶೀ’ (ಅದ್ಭುತ ಮಹಿಳೆ’) ಎಂಬ ಶೀರ್ಷಿಕೆ ಅಡಿಯಲ್ಲಿ ಎಲ್ಲಾ ಬ್ಲಾಕ್ ಗಳಲ್ಲಿ ಮಹಿಳೆಯರೊಂದಿಗೆ ಧ್ವಜಾರೋಹಣ ನೆರವೇರಿಸಲಾಗುವುದು ಎಂದು ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಅರುಣ ದೋತರಬಂಡಿ ಅವರು ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು, ರಾಷ್ಟ್ರೀಯ ಯುವ ಕಾಂಗ್ರೆಸ್ ದೇಶಾದ್ಯಂತ ಮಹಿಳೆಯರನ್ನು ರಾಜ್ಯ ಮಟ್ಟ, ಜಿಲ್ಲಾ ಮಟ್ಟ ಮತ್ತು ವಿಧಾನಸಭಾ ಮಟ್ಟದಲ್ಲಿ ಶಕ್ತಿ ಕ್ಲಬ್ ಮೂಲಕ ಸಂಪರ್ಕಿಸಲು ಪ್ರಯತ್ನಿಸುತ್ತದೆ. ಈ ಕ್ಲಬ್ ಮೂಲಕ ನಾವು ಮಹಿಳೆಯರನ್ನು ಸಬಲೀಕರಣಗೊಳಿಸಲು ಪ್ರಯತ್ನಿಸುತ್ತೇವೆ. ತಮ್ಮ ಆಯ್ಕೆಯ ಯಾವುದೇ ಕ್ಷೇತ್ರದಲ್ಲಿ ಜೀವನದಲ್ಲಿ ಮುನ್ನಡೆಯಲು ಶಕ್ತಿ ನೀಡಲು ಈ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಯಾದ್ಯಂತ ಬ್ಲಾಕ್ ಮಟ್ಟದಲ್ಲಿ ಯುವ ಕಾಂಗ್ರೆಸ್ ನ ಕಾರ್ಯಕರ್ತರು ಯುವತಿಯರ ನೇತೃತ್ವದಲ್ಲಿ ಧ್ವಜಾರೋಹಣ ಮಾಡಬೇಕೆಂದು ಎಲ್ಲಾ ತಾಲೂಕ ಯುವ ಕಾಂಗ್ರೆಸ್ ಸಮಿತಿ, ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಎಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.
ಭಾರತ ದೇಶ ಸಂಪೂರ್ಣ ಸ್ವತಂತ್ರ್ಯ ಪಡೆದುಕೊಳ್ಳುವಲ್ಲಿ ಅನೇಕ ಸಾವು ನೋವುಗಳನ್ನು ಅನುಭವಿಸಿದೆ. ಸ್ವತಂತ್ರ್ಯ ಭಾರತಕ್ಕಾಗಿ ತಮ್ಮ ಜೀವನವನ್ನು ಅರ್ಪಿಸಿದ ಮಹಾನ್ ನಾಯಕರನ್ನು ಸ್ಮರಿಸಿ ಅವರ ಸದೃಢ ಗುರಿಯ ಉದ್ದೇಶದ ಕನಸನ್ನು ನನಸು ಮಾಡುವ ಜವಾಬ್ದಾರಿ ಯುವಕರ ಮೇಲಿದೆ ಹಾಗಾಗಿ ಎಲ್ಲಾ ಯುವಕರು ಸೇರಿ ಮಹಿಳೆಯರಿಂದ ಧ್ವಜಾರೋಹಣ ನೆರವೇರಿಸಬೇಕೆಂದು ತಿಳಿಸಿದ್ದಾರೆ.
ಪ್ರಸ್ತುತ ದೇಶಾದ್ಯಂತ ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸಿವೆ. ಮಹಿಳೆಯರ ಮೇಲಿನ ದೌರ್ಜನ್ಯಗಳಿಂದಾಗಿ ಅವರನ್ನು ದಮನ ಮತ್ತು ಶಿಕ್ಷೆಗೆ ಗುರಿಪಡಿಸಲಾಗುತ್ತಿದೆ. ಈ ಅಸಮಾನತೆಯನ್ನು ಹೋಗಲಾಡಿಸಲು, ದೇಶದ ಪ್ರತಿಯೊಬ್ಬ ಮಹಿಳೆ ತನ್ನ ಹಕ್ಕು ಮತ್ತು ಹಂಚಿಕೆಗಾಗಿ ಯಾರನ್ನೂ ಅವಲಂಬಿಸಬಾರದು ಎಂದು ಯುವ ಕಾಂಗ್ರೆಸ್ ’ಅದ್ಭುತ ಮಹಿಳೆ’ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ದ್ವಜಾರೋಹಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸೂಚಿಸಿದ್ದಾರೆ.