ಯುವ ಮತದಾರರಿಗೆ ಜಾಗೃತಿ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಏ.೬; ಚಿತ್ರದುರ್ಗ ನಗರದ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿಯ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಗುರುವಾರ ಯುವ ಮತದಾರರಿಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾನ ನಿಮ್ಮೆಲ್ಲರ ಹಕ್ಕು. ಅದನ್ನು ತಪ್ಪದೆ ಚಲಾಯಿಸುವ ಮೂಲಕ ಪ್ರೌಢ ನಾಗರಿಕರಾಗಿ ಎಂದು ಕರೆ ನೀಡಿದರು.ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಕಾರ್ಯಕ್ರಮದಲ್ಲಿ ಜಿ.ಪಂ ಉಪ ಕಾರ್ಯದರ್ಶಿ ತಿಮ್ಮಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ, ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ, ಸ್ವೀಪ್ ಸಮಿತಿ ಜಿಲ್ಲಾ ಸಂಯೋಜಕಿ ಸುμÁ್ಮರಾಣಿ ಹಾಗೂ ವಸತಿ ನಿಲಯಗಳ ನಿಲಯ ಪಾಲಕರು ಇದ್ದರು.