ಯುವ ಮತದಾರರ ಸೇರ್ಪಡೆಗೆ ಜಾಗೃತಿ ಅಗತ್ಯ: ವಸ್ತ್ರದ್


ಸಂಜೆವಾಣಿ ವಾರ್ತೆ
ಹೊಸಪೇಟೆ, ಡಿ.23: ಮತದಾರರ ಪಟ್ಟಿಯಲ್ಲಿ ಯುವ ಮತದಾರರ ಸೇರ್ಪಡೆಗೆ ಜಾಗೃತಿ ಮೂಡಿಸಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಹೇಳಿದರು.
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024, ಯುವ ಮತದಾರರ ನೋಂದಣಿ ಸಂಬಂಧ ಗುರುವಾರ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಏರ್ಪಡಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಲು ಹೊಸಮತದಾರರಿಗೆ ಆದ್ಯತೆ ನೀಡಬೇಕು.ಕಾಲೇಜುಗಳಿಗೆ ಭೇಟಿ ನೀಡಿ 18 ವರ್ಷ ಮೇಲ್ಪಟ್ಟ ಎಲ್ಲಾ ಯುವ ಮತದಾರರನ್ನು ನೋಂದಾಯಿಸಬೇಕು. ಹಾಗೆಯೇ ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಗೆ ಮತದಾರರ ಹೆಸರು ಸೇರ್ಪಡೆಗೆ ಮುಂದಾಗಬೇಕು. ವಲಸಿಗರು, ಆದಿವಾಸಿಗಳು, ಕಾರ್ಮಿಕರು, ವಿಶೇಷಚೇತನರುಹೀಗೆ ಅರ್ಹ ಮತದಾರರ ಬಗ್ಗೆ ಗಮನಹರಿಸಬೇಕು. ಮತದಾನದಹಕ್ಕನ್ನು ಚಲಾಯಿಸುವಮಹತ್ವದಬಗ್ಗೆಯೂಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಯುವ ಮತದಾರರ ನೋಂದಣಿ ಹಾಗೂ ಮತದಾನ ಪ್ರಕ್ರಿಯೆ ಹಾಗೂ ಜಿಲ್ಲೆಯ ಸ್ವೀಪ್ ಚಟುವಟಿಕೆಗಳ ಬಗ್ಗೆಸಾಮಾಜಿಕ ಜಾಲತಾಣಗಳ ಮೂಲಕವು ವಿಶೇಷ ಜಾಗೃತಿ ಮೂಡಿಸಿ. ಮತದಾರರನೋಂದಣಿಮತ್ತುಮತದಾನದಮೂಲಕ ಚುನಾವಣಾಭಾಗವಹಿಸುವಿಕೆ ಹೆಚ್ಚಾಗಲಿದ್ದು, ಈ ಹಿನ್ನೆಲೆಯಲ್ಲಿಎಲ್ಲಾ ಕಚೇರಿಗಳಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಎಲ್ಲಾ ನೌಕರರ ಹೆಸರಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಎಲ್ಲರಿಗೂ ವೋಟರ್ ಹೆಲ್ಪ್‍ಲೈನ್ ಆ್ಯಪ್, ಸಹಾಯವಾಣಿ ಸಂಖ್ಯೆ: 1950ರ ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ. ಅವರು ಮಾತನಾಡಿ, ವಿಶೇಷ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ ಮತ್ತು ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲಾ ಸ್ವೀಪ್ ಕಾರ್ಯಕ್ರಮದಡಿ ಬಿ.ಎಲ್.ಓಗಳ ಮನೆ ಮನೆ ಭೇಟಿ, ಮತದಾರರ ಜಾಗೃತಿ ಕ್ಲಬ್‍ಗಳಿಂದ, ಎನ್.ಆರ್.ಎಲ್.ಎಂ ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ವೀರೇಶ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ ಹಾಗೂ ಮಹಿಳಾ ಸದಸ್ಯರಿಂದ ಮನೆ ಮನೆ ಭೇಟಿ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯ ಎಲ್ಲಾ 6 ತಾಲ್ಲೂಕಿನ 137 ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ವಾಹನಗಳ ಮೂಲಕ ಮತದಾನ ಜಾಗೃತಿ ಮೂಡಿಸಲಾಗಿದೆ. ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಪ್ರಬಂಧ, ಬಿತ್ತಿ ಚಿತ್ರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

One attachment • Scanned by Gmail