ಯುವ ಶಕ್ತಿ ಸದ್ಬಳಕೆ ಆಗಲಿ

ಬೀದರ್:ಆ.2: ಯುವ ಜನರಲ್ಲಿ ಇರುವ ಅಗಾಧ ಶಕ್ತಿ, ಸಾಮಥ್ರ್ಯದ ಸದ್ಬಳಕೆ ಆಗಬೇಕು ಎಂದು ಬಿ.ವಿ. ಭೂಮರಡ್ಡಿ ಕಾಲೇಜು ಪ್ರಾಚಾರ್ಯೆ ಡಾ. ದೀಪಾ ರಾಗಾ ಹೇಳಿದರು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಇಲ್ಲಿಯ ಸಿದ್ಧಾರೂಢ ಮಠದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಯುವ ಜನರು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು ತಿಳಿಸಿದರು.

ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ ಮಾತನಾಡಿ, ವಿದ್ಯಾರ್ಥಿನಿಯರು ಮಹಿಳಾ ಸಾಧಕರ ಜೀವನ ಚರಿತ್ರೆ ಓದಬೇಕು. ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ, ಸಿದ್ಧಾರೂಢ ಡಿ.ಎಡ್. ಕಾಲೇಜು ಪ್ರಾಚಾರ್ಯ ಮಾಣಿಕರಾವ್ ಪಾಂಚಾಳ, ಶಿವಕುಮಾರೇಶ ಗುರುಕುಲ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಸವರಾಜ ಮ್ಯಾಗೇರಿ ಮಾತನಾಡಿದರು.

ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜು ಪ್ರಾಚಾರ್ಯ ನಾಗಪ್ಪ ಜಾನಕನೋರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ರಾಜಮ್ಮ ನೇಳಗೆ, ನಟರಾಜ ಸುತಾರ್, ರಾಮ ಜಮಾದಾರ್, ಈಶ್ವರ ರೆಡ್ಡಿ, ರಾಜಶೇಖರ, ಅರ್ಚನಾ ಹಲಬುರ್ಗೆ, ಮಂಗಲಾ ಲಕ್ಕಶೆಟ್ಟಿ, ಸಪ್ನಾ ಸ್ವಾಮಿ, ಡಾ. ಪಂಡಿತ ಗಂಗಶೆಟ್ಟಿ, ಶ್ರೀಲತಾ ಇದ್ದರು. ಉಪನ್ಯಾಸಕಿ ರಾಖಿ ಕಾಡಗೆ ನಿರೂಪಿಸಿದರು. ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಅಂಬಿಕಾ ಗಿರಿ ವಂದಿಸಿದರು.