ಯುವ ಸಂಸತ್ ಸ್ಪರ್ಧೆ ರಾಜ್ಯ ಮಟ್ಟಕ್ಕೆ ಆಯ್ಕೆ


(ಸಂಜೆವಾಣಿ ವಾರ್ತೆ)
ಬಳ್ಳಾರಿ ನ 06 : ನಗರದ ಸಂತ ಜಾನ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಿಂದ 15 ಕಾಲೇಜಿನ 150 ವಿದ್ಯಾರ್ಥಿಗಳು ಭಾಗವಹಿಸಿದ್ದರು.
 ನಗರದ ಸರ್ಕಾರಿ ಮಾಜಿ ಪುರಸಭೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಯಾದ ಲಂಕೇಶ್ ಪ್ರಥಮ ಸ್ಥಾನವನ್ನು ಗಳಿಸಿದ್ದಾನೆ. ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಹೊಸಪೇಟೆಯ ಟಿಎಂ ಎ ಇಎಸ್ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಗಳಾದ ರಾಶಿ ಜೈನ್ ಮತ್ತು ಪ್ರೇಕ್ಷ ಜೈನ್ ಪಡೆದು ಕೊಂಡಿದ್ದಾರೆ.
 ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳು ಈ ತಿಂಗಳ ಕೊನೆಯಲ್ಲಿ ನಡೆಯುವ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

One attachment • Scanned by Gmail