ಯುವ ಸಮೂಹದಿಂದ ರೇಣುಕಾಚಾರ್ಯ ಜಯಂತಿ ಆಚರಣೆ

(ಸಂಜೆವಾಣಿ ವಾರ್ತೆ)
ಔರಾದ :ಮಾ.6: ಪಟ್ಟಣದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಉದ್ಭವಲಿಂಗ ಶ್ರೀ ಅಮರೇಶ್ವರ ದೇಗುಲದಲ್ಲಿ ಔರಾದ ಯುವ ಸಮೂಹದ ವತಿಯಿಂದ ಆದಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಜರುಗಿತು.
“ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೆ ವಿಶ್ವಕ್ಕೆ ಶಾಂತಿ” ಎಂದು ಭೋದಿಸಿದ ಹಾಗೂ ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗೃಂಥವನ್ನು ಮನುಕುಲಕ್ಕೆ ಕೊಡುಗೆಯಾಗಿ ನೀಡಿ ಸಾಮರಸ್ಯ, ಸಹಬಾಳ್ವೆ, ಸೌಹರ್ದತೆ ಬದುಕನ್ನು ಅವರು ನಮಗೆ ಬೋಧಿಸಿದ್ದಾರೆ. ಭಾರತದಾದ್ಯಂತ ಕೋಟ್ಯಾಂತರ ಭಕ್ತ ಸಮೂಹ ಹೊಂದಿದ್ದಾರೆ, ಇಂತಹ ಮಹಾನ್? ಚೇತನರ ಜಯಂತಿಯನ್ನು ಪ್ರತಿ ವರ್ಷ ಫಾಲ್ಗುಣ ಶುದ್ಧ ತ್ರಯೋದಶಿಯಂದು ಆಚರಿಸಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು ವೀರಶೈವ ಸಮಾಜಕ್ಕೆ ಹೆಮ್ಮೆಯ ಸಂಗತಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡ ಶರಣಪ್ಪ ಪಂಚಾಕ್ಷರಿ, ಚಂದ್ರಪಾಲ ಪಾಟೀಲ, ಸೋಮನಾಥ ಸ್ವಾಮಿ, ಶ್ರೀಕಾಂತ ಅಲ್ಮಾಜೆ, ರಾಜಪ್ಪ ಏಡವೆ, ಅಮರೇಶ ಮಸ್ಕಲೆ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಅಧ್ಯಕ್ಷ ಆನಂದ ದ್ಯಾಡೆ, ನಗರಾಧ್ಯಕ್ಷ ಅಮರಸ್ವಾಮಿ ಸ್ಥಾವರಮಠ, ಸಚ್ಚಿದಾನಂದ ಸ್ವಾಮಿ, ಸೂರ್ಯಕಾಂತ ಸ್ವಾಮಿ, ಬಸವರಾಜ ದ್ಯಾಡೆ, ಬಸವರಾಜ ಸ್ವಾಮಿ, ವೀರೇಶ ಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.