ಯುವ ಸಾಹಿತಿ ವಿರೇಶ್‌ರಿಗೆ ಚೈತನ್ಯಶ್ರೀ ರಾಜ್ಯ ಪ್ರಶಸ್ತಿ

ಲಿಂಗಸುಗೂರು.ಜ.೩-ಕಥಾಬಿಂದು ಪ್ರಕಾಶನದ ೧೩ನೇ ವಾರ್ಷಿಕೋತ್ಸವ, ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನಗಳ ಸಹಯೋಗದಲ್ಲಿ ಡಿ.೨೭ರಂದು ನಡೆದ ಸಾಹಿತ್ಯೋತ್ಸವದಲ್ಲಿ ಯುವಸಾಹಿತಿ, ಉದಯೋನ್ಮುಖ ಬರಹಗಾರ ವಿರೇಶ ಎಂ.ಎಸ್. ಸಿಂಧನೂರು ಇವರಿಗೆ ಚೈತನ್ಯಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಸಾಪ ಅಧ್ಯಕ್ಷ ಎಸ್.ಪ್ರದೀಪ್‌ಕುಮಾರ ಕಲ್ಕೂರು, ಚಂದ್ರಶೇಖರ ಬೆಲ್ಚಡ, ಡಾ.ನೆಗಳಗುಳಿ ಸೇರಿ ಹಲವು ಗಣ್ಯರು ಸಮಾರಂಭದಲ್ಲಿದ್ದರು.