ಜೇವರ್ಗಿ:ಜೂ.23: ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೇವರ್ಗಿ ನ್ಯಾಯಾಲಯದ ಆವರಣದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಕುರಿತು ಮಾತನಾಡಿದ ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯದೀಶರಾದ ಸಂದೀಪ್ ನಾಯಕ್ ಯೋಗದಿಂದಲೇ ಉತ್ತಮ ಆರೋಗ್ಯ ಸಾಧ್ಯ ಎಂದು ಹೇಳಿದರು.
ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ಜೇವರ್ಗಿ ಸಂಯುಕ್ತ ಆಶ್ರಯದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಿದರು, ನ್ಯಾಯಾಧೀಶರು ಸೇರಿದಂತೆ ನ್ಯಾಯವಾದಿಗಳು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಸಾಮೂಹಿಕ ಯೋಗ ಮಾಡುವ ಮೂಲಕ ಆಚರಿಸಲಾಯಿತು.
ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಎಂ.ಐ ಸುಗೂರು ಸೇರಿದಂತೆ ಕಾರ್ಯದರ್ಶಿಗಳಾದ ಬಿ.ಎನ್ ಕೊಂಬಿನ ಹಾಗೂ ಉಪಾಧ್ಯಕ್ಷರಾದ ವಿಜಯಕುಮಾರ್ ಪಾಟೀಲ, ಸೇರಿದಂತೆ ರಾಮನಾಥ್ ಭಂಡಾರಿ ಹಾಗೂ ವಕೀಲರಾದ ಕೆ.ಇ.ಬಿರಾದಾರ, ಪಿ ಎಸ್ ಪಾಟೀಲ್ ಸೇರಿದಂತೆ,ಸಿದ್ದು ಯಂಕಂಚಿ, ರಾಜು ಮುದ್ದಡಗಿ ಹಾಗೂ ಇತರರು ಭಾಗವಹಿಸಿದ್ದರು.