ಯೋಗದಿಂದ ಉತ್ತಮ ಆರೋಗ್ಯ ವೃದ್ಧಿ : ಶಾಸಕ ಲಕ್ಷ್ಮಣ ಸವದಿ

ಅಥಣಿ : ಜೂ.21:ಪ್ರತಿಯೊಬ್ಬರೂ ಯೋಗ, ಧ್ಯಾನ ಮಾಡುವುದರಿಂದ ನೆಮ್ಮದಿ, ಆರೋಗ್ಯ ಕಾಪಾಡಿಕೊಳ್ಳಬಹುದು, ಯೋಗದಿಂದ ಆರೋಗ್ಯ ತುಂಬಾ ಚೆನ್ನಾಗಿರುತ್ತದೆ. ಆದ್ದರಿಂದ ಯೋಗಾಭ್ಯಾಸವನ್ನು ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿ ಮಾಡಿಕೊಳ್ಳಬೇಕು ಎಂದು ಮಾಜಿ ಡಿಸಿಎಂ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು ಹೇಳಿದರು
ಅವರು ಪಟ್ಟಣದಲ್ಲಿ ಯೋಗ ದಿನಾಚರಣೆ ಬಗ್ಗೆ ಮಾತನಾಡಿ ಮಾನಸಿಕ ಒತ್ತಡ, ಮಧುಮೇಹ, ಹೃದಯ ಮತ್ತು ಶಾಸ್ವಕೋಶ ಸಂಬಂಧಿತ ಕಾಯಿಲೆಗಳಿಂದ ಮುಕ್ತವಾಗಲು ಯೋಗ, ಪ್ರಾಣಾಯಾಮ ಅವಶ್ಯಕತೆಯಿದೆ. ನಿತ್ಯವೂ ಯೋಗ, ಧ್ಯಾನದಲ್ಲಿ ತೊಡಗಬೇಕು ಯೋಗವು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೆರವಾಗುತ್ತದೆ. ನಮಲ್ಲಿ ಕಾಣಿಸಿಕೊಳ್ಳುವ ಹಲವು ರೋಗಗಳಿಗೆ ಪರಿಹಾರವನ್ನೂ ಕಂಡುಕೊಳ್ಳಬಹುದು. ಆಧುನಿಕ ಒತ್ತಡದ ಬದುಕಿನಲ್ಲಿ ಬಹುತೇಕರಿಗೆ ಯೋಗ ಈ ಎಲ್ಲ ಒತ್ತಡಗಳನ್ನು ತಡೆದು ಮನಸ್ಸನ್ನು ಪ್ರಶಾಂತಗೊಳಿಸುತ್ತದೆ. ರೋಗ ಮುಕ್ತ, ಸ್ವಸ್ಥ-ಸುಸ್ಥಿರ ಸಮಾಜ ನಿರ್ಮಾಣಕ್ಕೆ ಯೋಗ ಅತ್ಯವಶ್ಯಕ’ ಎಂದರು.