ಯೋಗಾಭ್ಯಾಸ ಆರೋಗ್ಯ ವೃದ್ದಿಗೆ ಸಹಕಾರಿ : ನ್ಯಾಯಾಧೀಶ ನಲವಡೆ

ವಿಜಯಪುರ:ಜೂ.22: ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಪಾಡಿಕೊಳ್ಳುವುದಲ್ಲದೇ, ಸದೃಢ ಆರೋಗ್ಯ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗ ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎ.ನಲವಡೆ ಹೇಳಿದರು.

ಬುಧವಾರ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾದ 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಸಂತೋಷ ಎಸ್.ಕುಂದರ, ವಕೀಲರ ಸಂಘದ ಅಧ್ಯಕ್ಷ ಐ.ಜಿ.ಚಾಗಶೆಟ್ಟಿ, ವಿವಿಧ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು, ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.