ಯೋಗ ಪಟು ರಾಜು ಮಾನೆ -ರಾಜ್ಯಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆ

ಸಂಜೆವಾಣಿ ವಾರ್ತೆ,
ವಿಜಯಪುರ:ಡಿ.11:ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ-3 ನೇ ಸೆಮೆಸ್ಟರ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ಯೋಗ ಪಟು ರಾಜು ಮಾನೆ ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮಟ್ಟದ ಯೋಗ ಸ್ಪರ್ಧೆಯಲ್ಲಿ (ಯುನಿವ್ಹರಸಿಟಿ ಬ್ಲ್ಯೂ) ಪ್ರಥಮ ಸ್ಥಾನ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾನೆ.
ಜನವರಿ 2024 ರಲ್ಲಿ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಕ್ರೀಡಾ ಸಾಧನೆಗೈದ ಯೋಗ ಪಟು ರಾಜು ಮಾನೆ ಅವರನ್ನು ಸನ್ಮಾಸಿಸಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎ.ಐ. ಹಂಜಗಿ, ಕ್ರೀಡಾ ನಿರ್ದೇಶಕ ಪ್ರೊ. ಸಂಗಮೇಶ ಗುರವ, ಐ.ಕ್ಯೂ.ಎ.ಸಿ ಸಂಚಾಲಕ ಡಾ. ಸಂತೋಷ ಕಬಾಡೆ, ಕ್ರೀಡಾ ಸಮಿತಿಯ ಸದಸ್ಯರಾದ ಪ್ರೊ. ಎಂ.ಎಸ್. ಖೊದ್ನಾಪೂರ, ಡಾ. ರಾಜಶ್ರೀ ಮಾರನೂರ, ಡಾ. ರೋಹಿಣಿ ಹಿರೇಶೆಡ್ಡಿ, ಡಾ. ಬಿ.ಎಂ. ಕೊರಬು ಹಾಗೂ ಕಾಲೇಜಿನ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.