ಯೋಜನೆಗಳ ಅನುಷ್ಠಾನದ ಮೂಲಕ ಮಕ್ಕಳ ಭವಿಷ್ಯ ಉಜ್ವಲಗೊಳಿಸಿ: ಗುರುಪ್ರಸಾದ

(ಸಂಜೆವಾಣಿ ವಾರ್ತೆ)
ಚಿಂಚೋಳಿ,ಡಿ.29- ಶಾಲಾ ಪೂರ್ವ ಶಿಕ್ಷಣ ಯೋಜನೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮೂಲಕ ಉದ್ದೇಶವಾಗಿದೆ ಇದನ್ನು ಮಕ್ಕಳ ಹಂತಕ್ಕೆ ತಲುಪಿಸುವ ಮೂಲಕ ಮಕ್ಕಳ ಭವಿಷ್ಯ ಉಜ್ವಲಗೊಳಿಸಬೇಕಿದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಗುರುಪ್ರಸಾದ ಕರೆನೀಡಿದರು.
ತಾಲೂಕಿನ ಕಲ್ಲೂರ್ ರೋಡ್ ಗ್ರಾಮದ ಅಂಗನವಾಡಿಯಲ್ಲಿ ಕೆ.ಕೆ.ಆರ್.ಡಿ.ಬಿ. ಮೈಕೋ ಅನುದಾನ ಅಡಿಯಲ್ಲಿ ಮತ್ತು ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಆಯೋಜಿಸಿದ್ದ ಮೂರನೇ ಹಂತದ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕುರಿತು ಅಂಗನವಾಡಿ ಕಾರ್ಯಕರ್ತರಿಗೆ ಮೂರು ದಿನಗಳ ತರಬೇತಿ ಶಿಬಿರಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸೂಪರ್ವೈಸರ್ ರೇಣುಕಾ. ಮತ್ತು ಅಂಗನವಾಡಿ ಕಾರ್ಯಕರ್ತೆ ಶಾಂತಾಬಾಯಿ ಕಲ್ಲೂರ್. ಹಾಗೂ ಮಿರಿಯಾಣ ವ್ಯಾಪ್ತಿಗೆ ಬರುವ ಎಲ್ಲಾ ಅಂಗನವಾಡಿಗಳ ಕಾರ್ಯಕರ್ತರು ತರಬೇತಿಯಲ್ಲಿ ಉಪಸ್ಥಿತರಿದ್ದರು.