ಯೋಜನೆಗಳ ಸದುಪಯೋಗ ಪಡೆಯಿರಿ: ಉಮಾಕಾಂತ ಹಳ್ಳೆ

ಚಿತ್ತಾಪುರ:ಎ.2: ಮಹಿಳೆಯರು ಶಿಶು ಅಭಿವೃದ್ಧಿ ಇಲಾಖೆಯಲ್ಲಿನ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಹಸೀಲ್ದಾರ್ ಉಮಾಕಾಂತ್ ಹಳ್ಳೆ ಹೇಳಿದರು.

ಪಟ್ಟಣದ ತಹಸಿಲ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ 4ನೇ ತ್ರೈಮಾಸಿಕ ಸಮನ್ವಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಹಿಳೆಯರ ಮತ್ತು ಬಾಲಕಿಯರ ಹಾಗೂ ಮಗುವಿನ ಉತ್ತೇಜನಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಫಲಾನುಭವಿಗಳು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರಾಜಕುಮಾರ್ ರಾಠೋಡ್ ಮಾತನಾಡಿ ಭಾಗ್ಯಲಕ್ಷ್ಮೀ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ಪೋಷಣ್ ಅಭಿಯಾನ ಯೋಜನೆ, ಬಾಲ್ಯ ವಿವಾಹ, ಸ್ತ್ರೀಶಕ್ತಿ ಯೋಜನೆ, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಯೋಜನೆ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಮತ್ತು ಬಾಲ ವೈಶ್ಯಾ ಪದ್ದತಿ ತಡೆಗಟ್ಟುವ ಯೋಜನೆಗಳ 4ನೇ ತ್ರೈಮಾಸಿಕ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಯೋಜನೆಯ ಆಧೀನದಲ್ಲಿರುವ ಎಲ್ಲಾ ಯೋಜನೆಗಳ ಕುರಿತು ಪ್ರಗತಿ ವರದಿಯನ್ನು ಸಭೆಯಲ್ಲಿ ಹೇಳಲಾಯಿತು. ಹಾಗೂ ಭಾಗ್ಯಲಕ್ಷ್ಮೀ ಯೋಜನೆಯಲ್ಲಿ ನೊಂದಣಿಯಾದ ಫಲಾನುಭವಿಗಳಿಗೆ ಮಾನ್ಯ ತಹಸಿಲ್ದಾರರು ಹಾಗೂ ಅರಕ್ಷಕ ವೃತ್ತ ನಿರೀಕ್ಷಕರ ಅಧ್ಯಕ್ಷತೆಯಲ್ಲಿ ಬಾಂಡ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಿಪಿಐ ಕೃಷ್ಣಪ್ಪ ಕಲ್ಲದೇವರ, ಪುರಸಭೆ ಮುಖ್ಯ ಅಧಿಕಾರಿ ಮನೋಜ್ ಕುಮಾರ್ ಗುರಿಕಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗಿರೀಶ್ ರಂಜೋಳಕರ್, ತಾಲೂಕ ಆಸ್ಪತ್ರೆ ಸಿಬ್ಬಂದಿ ಹಾಗೂ ಪಶು ಸಂಗೋಪನಾ ಆಸ್ಪತ್ರೆ ಅಧಿಕಾರಿಗಳು ಮತ್ತು ಕಚೇರಿಯ ಮೇಲ್ವಿಚಾರಕಿಯರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.