
ಸಂಜೆವಾಣಿ ವಾರ್ತೆ
ಕುರುಗೋಡು:ಸೆ.14: ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸಮಸ್ಯೆಗಳು ಎದುರಾದಗ ಚಿಕಿತ್ಸೆ ಪಡೆಯಲು ಹಣ ಇಲ್ಲದೆ ಬಹಳಷ್ಟು ಜನ ಮೃತಪಟ್ಟಿದ್ದಾರೆ. ಹಾಗಾಗಿ ಕೇಂದ್ರ ಸರಕಾರದ ಆಯುಷ್ಮಾನ ಭವ ಯೋಜನೆಯನ್ನು ಸದುಪಯೋಗ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಾಧಿಕಾರಿ ಡಾ.ರೂಪ ಎಸ್.ಜಾಲಿಹಾಳ್ ಕರೆ ನೀಡಿದರು.
ಅವರು ಪಟ್ಟಣದ ಸಮುದಾಯ ಆರೋಗ್ಯ ಕೆಂದ್ರದ ಪ್ರಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಆಯುಷ್ಮಾನ್ ಭವ ರಾಷ್ಟ್ರಪತಿ ದ್ರೌಪತಿಮುರ್ಮ ಉದ್ಘಾಟನಾ ಕಾರ್ಯಕ್ರಮ ವೀಕ್ಷಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಯುಷ್ಮಾನ್ ಭವದ ಆರೋಗ್ಯ ಸುರಕ್ಷಾ ಯೋಜನೆಗಳನ್ನು ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಸಾರ್ವಜನಿಕರ ಮನೆ ಬಾಗಿಲಿಗೆ ಮುಟ್ಟಿಸುವ ಕಾರ್ಯದಲ್ಲಿ ಹೆಚ್ಚಿನ ಚಟುವಟಿಕೆಯಿಂದ ಆಳವಡಿಸಿಕೊಳ್ಳಬೇಕು. ಇನ್ನೂ ಸ್ವಚ್ಛತಾ ಅಭಿಯಾನ, ಅಂಗಾಂಗ ದಾನ ಜಾಗೃತಿ ಹಾಗೂ ರಕ್ತದಾನದ ಶಿಬಿರಗಳ ಆಯೋಜನೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಇದಕ್ಕೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ಸಹಕಾರ ಅಗತ್ಯ. ಪ್ರತಿಯೊಬ್ಬ ನಾಗರಿಕರು ಆರೋಗ್ಯ ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಮಂಜುನಾಥ ಮಾತನಾಡಿ, ಆರೋಗ್ಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಜನಪ್ರತಿನಿಧಿಗಳ ಸಹಕಾರದಿಂದ ಆಗಾಂಗ ದಾನ ಜಾಗೃತಿ ಮೂಡಿಸಲು ಮುಂದಾಗಬೇಕು. ಇದಕ್ಕೆ ನೊಂದಾಣಿ ಮಾಡಿಸಿಕೊಳ್ಳಲು ಸೆ.16ರಿಂದ ಮೊಬೈಲ್ ಆಪ್‌ನಲ್ಲಿ ಬರುತ್ತದೆ. ಇದರಿಂದ ಅಪಗಾತ ಸಂಭವಿಸಿದಾಗ ಹಾಗೂ ಹುಟ್ಟಿನಿಂದ ವಿಸೇಷ ಚೇತನರಿಗೆ ಸಹಾಯವಾಗುತ್ತದೆ. ಜೊತೆಗೆ ಮತ್ತೊಬ್ಬರ ಪ್ರಾಣ ಉಳಿಸಲು ಸಾಧ್ಯವಾಗುತ್ತದೆ. ಹಾಗಾಗಿ ಆರೋಗ್ಯ ಸಿಬ್ಬಂದಿಗಳು ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಇಂದಿನಿಂದ ಪ್ರಾರಂಭಿಸಬೇಕು ಎಂದರು.
ಪುರಸಭೆ ಸದಸ್ಯ ಯುವರಾಜ ಮತ್ತು ಸದಸ್ಯ ನಾಗಭೂಷಣ ಆರೋಗ್ಯ ಜಾಗೃತಿಯ ಮೂಡಿಸಲು ಸಹಕಾರ ನೀಡುತ್ತೇವೆ ಎಂಬ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಸ್.ಬಸವರಾಜ, ವ್ಯವಸ್ಥಾಪಕ ಲೋಕೇಶ್, ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಇದ್ದರು.