ಯೋಜನೆಯ ಸದುಪಯೋಗ ತಲುಪಿಸಲು ಕ್ರಮಕ್ಕೆ ಕರೆ

ಬ್ಯಾಡಗಿ,ಜು.27: ರಾಜ್ಯದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಸರ್ಕಾರಿ ಹಾಗೂ ಅನುದಾನಿತ ಶಾಲಾಮಕ್ಕಳಿಗೆ ವಾರದಲ್ಲಿ ಎರಡು ದಿನ ಮಧ್ಯಾಹ್ನದ ಬಿಸಿಯೂಟದ ಜೊತೆ ಕೋಳಿ ಮೊಟ್ಟೆ, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಇಲ್ಲವೇ ಶೇಂಗಾ ಚಿಕ್ಕಿಯನ್ನು ವಿತರಿಸಲು ಸರ್ಕಾರ ಮುಂದಾಗಿದ್ದು, ಶಾಲಾ ಶಿಕ್ಷಕರು ಈ ಯೋಜನೆಯ ಸದುಪಯೋಗ ಮಕ್ಕಳಿಗೆ ತಲುಪುವಂತೆ ಕ್ರಮ ವಹಿಸಬೇಕೆಂದು ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಹೇಳಿದರು.
ಪಟ್ಟಣದ ಎಸ್’ಜೆಜೆಎಂ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರಧಾನಮಂತ್ರಿ ಪೆÇೀಷಣಾಶಕ್ತಿ ನಿರ್ಮಾಣ ಯೋಜನೆಯಡಿ 1ರಿಂದ 8ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ/ಬಾಳೆಹಣ್ಣು/ಶೇಂಗಾಚಿಕ್ಕಿ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಮೀಕ್ಷೆಯ ವರದಿಯಲ್ಲಿ 6ರಿಂದ 15ನೇ ವಯೋಮಾನದ ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಬಹುಪೆÇೀಷಕಾಂಶಗಳ ನ್ಯೂನ್ಯತೆ ಅಧಿಕವಾಗಿರುವುದು ಕಂಡು ಬಂದಿದ್ದು ಇದರ ನಿವಾರಣೆಗಾಗಿ ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕಾಂಶವುಳ್ಳ ಆಹಾರವನ್ನು ಮಧ್ಯಾಹ್ನ ಬಿಸಿಯೂಟದೊಂದಿಗೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೀರ್ಮಾನಿಸಿರುವುದು ಸಂತಸದ ಸಂಗತಿ ಎಂದು ತಿಳಿಸಿದರು.
ಅಕ್ಷರ ದಾಸೋಹದ ತಾಲೂಕಾ ಸಹಾಯಕ ನಿರ್ದೇಶಕ ಎನ್. ತಿಮ್ಮಾರೆಡ್ಡಿ ಮಾತನಾಡಿ,
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಹಯೋಗದಡಿ ಪ್ರತಿ ವಿದ್ಯಾರ್ಥಿಗೆ ಒಟ್ಟು 46 ದಿನಗಳ ಅವಧಿಗೆ ಬೇಯಿಸಿದ ಮೊಟ್ಟೆ, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು/ಶೇಂಗಾ ಚಿಕ್ಕಿಯನ್ನು ಪೌಷ್ಟಿಕ ಆಹಾರದ ರೂಪದಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತಾಲೂಕಿನಲ್ಲಿ 15ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಜನೆಯ ಲಾಭವನ್ನು ಹೊಂದಲಿದ್ದು, ಎಲ್ಲ ಶಾಲೆಗಳ ಶಿಕ್ಷಕರು ಮಕ್ಕಳ ಅಭಿವೃದ್ಧಿಗಾಗಿ ಜಾರಿಯಾಗಿರುವ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪುರಸಭಾಧ್ಯಕ್ಷೆ ಸರೋಜಾ ಉಳ್ಳಾಗಡ್ಡಿ, ಉಪಾಧ್ಯಕ್ಷೆ ಗಾಯತ್ರಿ ರಾಯ್ಕರ್, ಎಸ್’ಡಿಎಂಸಿ ಉಪಾಧ್ಯಕ್ಷ ಸುರೇಶ ಉದ್ಯೋಗಣ್ಣನವರ, ಜಿತೇಂದ್ರ ಸುಣಗಾರ, ಶಿವಬಸಪ್ಪ ಕುಳೇನೂರ, ಕ್ಷೇತ್ರಶಿಕ್ಷಣಾಧಿಕಾರಿ ಐ.ಬಿ.ಬೆನಕೊಪ್ಪ, ಮುತ್ತಣ್ಣ ಮನೋಳಿಮಠ, ಉಪಪ್ರಾಚಾರ್ಯೆ ಗೀತಾ ಶೆಟ್ಟಪ್ಪನವರ ಹಾಗೂ ಬ್ಯಾಡಗಿ ಪಟ್ಟಣ ವ್ಯಾಪ್ತಿಯ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.