ಯೋಜನ ಪ್ರಾಧಿಕಾರದ ಅಧ್ಯಕ್ಷರಾಗಿ ಮಲ್ಲೇಶಪ್ಪ ನಾಯಕ್

ಗಂಗಾವತಿ ಮಾ.31: ಸ್ಥಳೀಯ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಬುಧವಾರ ನಗರದ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಹೊಸಮಲಿ ಮಲ್ಲೇಶಪ್ಪ ನಾಯಕ ಅವರು ಅಧಿಕಾರ ಸ್ವೀಕರಿಸಿದರು.
ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಕರೋನ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಯೋಜನಾ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನೂತನ ಪದಾಧಿಕಾರಿಗಳು ಜನಪರ ಕಾರ್ಯ ಮಾಡಬೇಕು. ಕೊರೊನಾ ಎರಡನೇ ಅಲೆ ಆರಂಭವಾಗಿರುವುದರಿಂದ ಎಲ್ಲರೂ ಮಾಸ್ಕ್, ಸ್ಯಾನಿಟೈಸರ್ ಗಳೊಂದಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದರು. ಅಲ್ಲದೇ ಸದಸ್ಯರಾಗಿ ನಾಗರಾಜ ಜೆ., ಚಂದ್ರಪ್ಪ ಉಪ್ಪಾರ, ಸಂಗಪ್ಪ ಚಲುವಾದಿ ಸಹ ಅಧಿಕಾರ ಸ್ವೀಕರಿಸಿದರು.
ಈ ವೇಳೆ ಬಿಜೆಪಿ ಹಿರಿಯ ಮುಖಂಡ ಎಚ್. ಗಿರೇಗೌಡ, ಕಾಡ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ನಗರಸಭೆ ಸದಸ್ಯರಾದ ರಮೇಶ್ ಚೌಡ್ಕಿ, ವಾಸುದೇವ ನವಲಿ, ಸಿ. ವೆಂಕಟರಮಣ, ಅಜಯ್ ಬಿಚ್ಚಾಲಿ, ಪರಶುರಾಮ ಮಡ್ಡೇರ, ನೀಲಕಂಠ ಕಟ್ಟಿಮನಿ, ಬಿಜೆಪಿ ಮಂಡಲ ಅಧ್ಯಕ್ಷ ಕಾಶಿನಾಥ ಚಿತ್ರಗಾರ, ಜಿಲ್ಲಾ ಯುವ ಮೋರ್ಚ ಅಧ್ಯಕ್ಷ ಯಮನೂರ ಚೌಡ್ಕಿ, ಪ್ರಮುಖರಾದ ಬಸಪ್ಪ ನಾಯಕ , ಜಿಲ್ಲಾ ಕೈಗಾರಿಕಾ ಪ್ರಕೋಷ್ಠ ಸಂಚಾಲಕ ವೀರೇಶ ಬಲಕುಂದಿ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಧೂಳ ಉಪಸ್ಥಿತರಿದ್ದರು.