ರಂಗಾರೆಡ್ಡಿ ಹಣ ದುರುಪಯೋಗ ಕ್ರಮಕ್ಕೆ ಒತ್ತಾಯ

ರಾಯಚೂರು, ಸೆ.೬, ಸಗಮಕುಂಟಾ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಸುಳ್ಳು ದಾಖಲೆ ಸೃಷ್ಟಿಸಿ ಲಕ್ಷಾನುಗಟ್ಟಲೆ ಹಣ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ ಹೈದ್ರಾಬಾದ ಕರ್ನಾಟಕ ದಲಿತ ಸಂಘರ್ಷ ಸಮತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ತಾಲೂಕಿನ ಸಗಮಕುಂಟಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವಂತಹ ಯರಗುಂಟಾ ಗ್ರಾಮದ ಹಾಲಿ ೨೦೨೦ ರಿಂದ ೨೦೨೫ ರವರೆಗೆ ಗ್ರಾಮ ಪಂಚಾಯತ್ ಸದಸ್ಯರಾದ ವಿಜಯಲಕ್ಷ್ಮೀ ಗಂಡ ರಂಗಾರೆಡ್ಡಿ ಇವರು ಸರ್ಕಾರದ ಹಣವನ್ನು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸರಕಾರ ಹಣವನ್ನು ಲೂಟಿ ಮಾಡಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು. ತನಿಖೆ ಮಾಡಿ ಸಾಕ್ಷಾಧಾರ ಮೂಲಕ ಅಧಿಕಾರದಿಂದ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆ ಕಾರ್ಯಕರ್ತರು ಇದ್ದರು.