ರಂಜಾನ್ ಹಬ್ಬಕ್ಕೆ ಶುಭ ಕೋರಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

oplus_2

ಬೀದರ್ :ಏ.12: ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ರಂಜಾನ್ ಪ್ರಯುಕ್ತ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಗುರುವಾರ ಬೆಳಗ್ಗೆ ಬೀದರ್ ನಗರದ ಈದ್ಗಾ ಮೈದಾನಕ್ಕೆ ಭೇಟಿ ನೀಡಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಇದೇ ವೇಳೆ ಅಲ್ಲಿದ್ದ ಸಚಿವರಾದ ರಹೀಂಖಾನ್ ರವರು, ಈಶ್ವರ್ ಖಂಡ್ರೆರವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸಿದ ಬಂಡೆಪ್ಪ ಖಾಶೆಂಪುರ್ ರವರು, ಮೈದಾನದ ಬಳಿಯಿದ್ದ ಮುಸ್ಲಿಂ ಸಮುದಾಯದ ಜನರೊಂದಿಗೆ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲ್ಪರ್, ರಾಜು ಚಿಂತಾಮಣಿ, ಸುದರ್ಶನ್ ಸುಂದರರಾಜ್ ರವರು ಸೇರಿದಂತೆ ಈದ್ಗಾ ಕಮಿಟಿಯ ಸದಸ್ಯರು, ಮುಸ್ಲಿಂ ಸಮುದಾಯದ ಮುಖಂಡರು ಇದ್ದರು.