
ರಾಯಚೂರು, ಆ.೧೫- ರಕ್ತದಾನ ಜೀವ ಉಳಿಸಲು ಸಹಕಾರಿಯಾಗಿದೆ ಎಂದು ರಾಜ್ಯ ವೈದ್ಯಕೀಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಬಸವ ಪಾಟೀಲ್ ಅವರು ಹೇಳಿದರು.
ಅವರಿಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ಒಳಂಗಣ ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ೭೬ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಿದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಪಘಾತ ಮತ್ತು ರಕ್ತದ ಕೊರತೆ ಇರುವ ಜನರ ಆರೋಗ್ಯ ವೃದ್ಧಿಗೆ ರಕ್ತದಾನ ಪ್ರಯೋಜನ ಆಗಲಿದೆ. ಹಾಗಾಗಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಆರೋಗ್ಯವಂತ ಯುವಕರು ಯಾವುದೇ ತಪ್ಪು ಕಲ್ಪನೆ ಇಟ್ಟುಕೊಳ್ಳದೇ ರಕ್ತದಾನ ಮಾಡಿದರೇ ಆಸ್ಪತ್ರೆಗಳಲ್ಲಿ ರಕ್ತದ ಕೊರತೆ ನೀಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಬಸವನಗೌಡ ದದ್ದಲ್, ಎ ವಸಂತಕುಮಾರ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಸಿಇಓ, ಸಹಾಯ ಆಯುಕ್ತರು,
ಆರೋಗ್ಯ ಅಧಿಕಾರಿ ಡಾ. ಸುರೇಂದ್ರ ಬಾಬು, ಆರೋಗ್ಯ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.