ರಕ್ತದಾನ ಶಿಬಿರ


ಸಂಜೆವಾಣಿ ವಾರ್ತೆ
ತೆಕ್ಕಲಕೋಟೆ, ಜ.21: ಸಮೀಪದ ಬಲಕುಂದಿ ಗ್ರಾಮದ ಬನ್ನಿ ಮಹಂಕಾಳಿ ರಥೋತ್ಸವ ಪ್ರಯುಕ್ತ ದೇವಸ್ಥಾನದ ಆವರಣದಲ್ಲಿ ಇಂದು ಬೆಳಿಗ್ಗೆ 7.30ರಿಂದ ಮಧ್ಯಾಹ್ನ 12 ಗಂಟೆವರೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ಬಳ್ಳಾರಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ತೆಕ್ಕಲಕೋಟೆ ಹಾಗೂ ಬಳ್ಳಾರಿಯ ವಿಮ್ಸ್ ರಕ್ತ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಈರಣ್ಣ ತಿಳಿಸಿದರು.
ಗ್ರಾಮ ಪಂಚಾಯತಿ ಸದಸ್ಯ ಬಸವರಾಜ, ವೆಂಕಟೇಶ ಮತ್ತು ಡಾ.ವಂಶಿಕೃಷ್ಣ, ಡಾ.ವಿಜಯ ಕುಮಾರ, ಆಶಾ ಕಾರ್ಯಕರ್ತೆಯರು,  ಗ್ರಾಮದ ಮುಖಂಡರು, ಯುವಕರು ಇದ್ದರು.