ರಕ್ಷಾ ಬಂಧನ ಯು.ಪಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ

ಲಕ್ನೋ, ಆ.೬- ರಕ್ಷಾ ಬಂಧನದ ಅಂಗವಾಗಿ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ, ರಾಜ್ಯದಲ್ಲಿ ಮಹಿಳೆಯರಿಗೆ ೪೮ ಗಂಟೆಗಳ ಕಾಲ ಉಚಿತ ಬಸ್ ಪ್ರಯಾಣ ಘೋಷಿಸಿದೆ.
ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಸಾರಿಗೆ ನಿಗಮ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಬೇಕು, ”ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.
ಆಗಸ್ಟ್ ೧೦ ರ ಮಧ್ಯರಾತ್ರಿಯಿಂದ ಆಗಸ್ಟ್ ೧೨ ರ ಮಧ್ಯರಾತ್ರಿಯವರೆಗೆ ಮಹಿಳೆಯರು ೪೮ ಗಂಟೆಗಳ ಕಾಲ’ಆಜಾದಿ ಕಾ ಅಮೃತ್ ಮಹೋತ್ಸವ’ ಹಿನ್ನೆಯಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಲಭ್ಯವಿರುತ್ತದೆ.
ಸುರಕ್ಷತೆಗೆ ಕ್ರಮ:
ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಮಹಿಳೆಯರ ಘನತೆ ಎತ್ತಿಹಿಡಿಯಬೇಕು ಮತ್ತು ಅವರಿಗೆ ಎಲ್ಲಾ ಸಮಯದಲ್ಲೂ ಸುರಕ್ಷಿತೆ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಬೆಂಗಳೂರಿಗೆ ಅಧಿಕೃತ ಭೇಟಿ ನೀಡಿದ ಉಪ ರಾಷ್ಟ್ರಪತಿಗಳು ರಾಜಭವನದಲ್ಲಿ ಸ್ಥಳೀಯ ವಿವಿಧ ಶಾಲೆಗಳ ಶಾಲಾ ಮಕ್ಕಳೊಂದಿಗೆ ರಕ್ಷಾಬಂಧನ ಆಚರಿಸಿ
ರಕ್ಷಾಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ಗೌರವದ ವಿಶೇಷ ಮತ್ತು ಆಳವಾದ ಬೇರೂರಿರುವ ಬಾಂಧವ್ಯದ ಆಚರಣೆಯಾಗಿದೆ ಎಂದು ಹೇಳಿದ್ದಾರೆ.
ಉಪರಾಷ್ಟ್ರಪತಿಗಳ ಸಚಿವಾಲಯದ ಪ್ರಕಾರ, ಪ್ರತಿಯೊಬ್ಬರನ್ನು ತಮ್ಮ ಸಹೋದರ ಸಹೋದರಿಯರಂತೆ ಕಾಣುವಂತೆ ಜನರನ್ನು ಒತ್ತಾಯಿಸಿದ ನಾಯ್ಡು, ನಾಗರಿಕರಲ್ಲಿ ಸಹೋದರತೆ ಮತ್ತು ಸೌಹಾರ್ದತೆಯನ್ನು ಉತ್ತೇಜಿಸುತ್ತದೆ ಮತ್ತು ನಮ್ಮ ರಾಷ್ಟ್ರವನ್ನು ಬಲಪಡಿಸುತ್ತದೆ ಎಂದು ತಿಳಿಸಿದೆ.
ಸನಾತನ ಭಾರತೀಯ ಕುಟುಂಬ ವ್ಯವಸ್ಥೆ ಶ್ಲಾಘಿಸಿದ ಅವರು, ಹಿರಿಯರನ್ನು ಗೌರವಿಸುವುದನ್ನು ಕಲಿಸುತ್ತದೆ ಮತ್ತು ಯುವಕರಲ್ಲಿ ಹಂಚಿಕೊಳ್ಳುವ ಮತ್ತು ಕಾಳಜಿಯ ಮನೋಭಾವ ಬೆಳೆಸುತ್ತದೆ ಎಂದು ಹೇಳಿದ್ದಾರೆ.