ರಗಡ್ ಲುಕ್ ನಲ್ಲಿ ಲವ್ಲಿಸ್ಟಾರ್ ಪ್ರೇಮ್

“ಅಪ್ಪ ಐ ಲವ್ ಯೂ”  ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದ ಲವ್ಲಿ ಸ್ಟಾರ್ ಪ್ರೇಮ್ ಈಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಾಗಿ ರಗಡ್ ಅವತಾರ ತಾಳಿದ್ದಾರೆ.

ಪ್ರೇಮ್ ಹುಟ್ಟುಹಬ್ಬದಂದು ಹೊಸ ಚಿತ್ರ ಸೆಟ್ಟೇರಿದೆ. ಚಿತ್ರಕ್ಕಿನ್ನೂ ಹೆಸರಿಟ್ಟಿಲ್ಲ. ಪೊಲಿಸ್ ಖದರ್ ನಲ್ಲಿ ಅಭಿಮಾನಿಗಳನ್ನು ರಂಜಿಸಲು ಮುಂದಾಗಿದ್ದಾರೆ.

ಈ ವೇಳೆ ಮಾತನಾಡಿದ ನೆನಪಿರಲಿ ಪ್ರೇಮ್ ಮಾತನಾಡಿ,ಈ ಮೊದಲು ಆಕ್ಷನ್ ಸಿನಿಮಾ ಮಾಡಿದ್ದೆ. ಬಹಳಷ್ಟು ಗ್ಯಾಪ್ ಆಗಿತ್ತು. ಲವ್ ಬ್ರ್ಯಾಂಡ್ ಆಗಿದ್ದರಿಂದ ಈಗ ಒಂದೊಳ್ಳೆ ಕಥೆ ಸಿಕ್ಕಿದೆ.ಖಡಕ್ ಪೊಲೀಸ್ ಅಧಿಕಾರಿ ಪಾತ್ರ  ಸ್ಕ್ರೀಪ್ಟ್ ರೆಡಿಯಾಗ್ತಿದೆ. ಕ್ಲೈಮ್ಯಾಕ್ಸ್ ಚರ್ಚೆ ಹಂತದಲ್ಲಿದೆ ಎಂದರು.

ನಿರ್ದೇಶಕ ತೇಜೇಶ್ ಮಾತನಾಡಿ, ಮೊದಲ ಸಿನಿಮಾ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಟೈಟಲ್ ಚರ್ಚೆಯಲ್ಲಿದೆ. ಕಥೆಗೆ ಪ್ರೇಮ್ ಅವರಿಗೆ ಸೂಕ್ತವಾದ ಕಥೆ ಆಯ್ಕೆ ಮಾಡಿದ್ದೇವೆ. ರಂಗಾಯಣ ರಘು ಮತ್ತಿತರಿದ್ದು ತಿಂಗಳಾಂತ್ಯದಿಂದ ಚಿತ್ರೀಕರಣ ನಡೆಯಲಿದೆ ಎಂದರು. ವಾಸುಕಿ ವೈಭವ್ ಸಂಗೀತ, ಆನಂದ್ ಮೀನಾಕ್ಷಿ ಛಾಯಾಗ್ರಹಣ ಚಿತ್ರಕ್ಕಿದೆ. ಹೆಸರಿಡದ ಸಿನಿಮಾಗೆ ಮಧು ಗೌಡ ಬಂಡವಾಳ ಹೂಡಿದ್ದಾರೆ.

ಶತ್ರು ಬಳಿಕ ರಗಡ್ ಅಧಿಕಾರಿ

ಶತ್ರು ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಪ್ರೇಮ್ ಬಹಳ ವರ್ಷದ ನಂತರ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದನ್ನು ಪ್ರೇಮ್‌ 2.0 ಎಂದು ಕರೆದುಕೊಂಡಿದ್ದಾರೆ.