
(ಸಂಜೆವಾಣಿ ವಾರ್ತೆ)
ಬಳ್ಳಾರಿ:ಏ,7- ರಘು ಆಚಾರ್ ಅವರಿಗೆ ಕಾಂಗ್ರೆಸ್ ಪಕ್ಷ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಟಿಕೆಟ್ ನಿರಾಜರಿಸಿರುವುದರಿಂದ ರಾಜ್ಯಾದ್ಯಾಂತ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದಿರಲು ವಿಶ್ವ ಕರ್ಮ ಸಮುದಾಯ ನಿರ್ಧರಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬಳ್ಳಾರಿ ಜಿಲ್ಲಾ ವಿಶ್ವ ಕರ್ಮ ವಿಕಾಸ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ಸೋನಾರ ಅವರು.
ಚಿತ್ರದುರ್ಗ-ದಾವಣಗೆರೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸತತವಾಗಿ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ. ಭ್ರಷ್ಟಾಚಾರ ರಹಿತ ಪ್ರಾಮಾಣಿಕ ಸೇವೆ ಸಲ್ಲಿಸಿರುವ ಜಿ.ರಘು ಆಚಾರ್, ಈ ಬಾರಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿದ್ದು, ನಿರಂತರವಾಗಿ ಕ್ಷೇತ್ರದ ಜನರ ಜೊತೆ ಸಂಪರ್ಕ ಹೊಂದಿದ್ದರು. ಆದರೆ ಅವರಿಗೆ ಕಾಂಗ್ರೆಸ್ ಪಕ್ಷ ಬಕೇಟ್ ನೀಡದೆ ವಂಚನೆ ಮಾಡಿದೆ.
ಕ್ಷೇತ್ರದ ಎಲ್ಲಾ ಸಮುದಾಯಗಳ ಜೊತೆಗೆ ಒಳ್ಳೆಯ ಒಡನಾಟ ಹೊಂದಿ ಜನರ ಕಷ್ಟ ಸುಖಗಳಿಗೆ ಬೆಂಬಲವಾಗಿ ನಿಂತಿದ್ದರು.
ಕರ್ನಾಟಕ ರಾಜ್ಯದಲ್ಲಿನ ವಿಶ್ವಕರ್ಮ ಸಮುದಾಯವು, ಎಲ್ಲಾ ಕ್ಷೇತ್ರಗಳಲ್ಲಿ ನಿರ್ಣಾಯಕ ಮತದಾರರನ್ನು ಹೊಂದಿದ್ದು. ಹಿಂದುಳಿದ ವರ್ಗದ ಅತೀ ಸಣ್ಣ ಸಮುದಾಯವನ್ನು ಕಡೆಗಣಿಸಿದ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಾದ್ಯಂತ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವುದಿಲ್ಲವೆಂದು ರಾಜ್ಯದ ವಿಶ್ವಕರ್ಮ ಸಮುದಾಯವು ತೀರ್ಮಾನಿಸಿದೆಂದು ಚಂದ್ರಕಾಂತ್ ಸೋನಾರ್ ಹೇಳಿದ್ದಾರೆ.