ರಜನಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಹೈದರಾಬಾದ್, ಡಿ.೨೫- ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವ ತಮಿಳು ಚಿತ್ರರಂಗದ ಖ್ಯಾತ ನಟ ರಜನಿಕಾಂತ್ ಅವರು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಅಧಿಕ ರಕ್ತದೊತ್ತಡ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿದೆ ಎಂದು ಆಸ್ಪತ್ರೆಯ ಮುಖ್ಯಸ್ಥರು ತಿಳಿಸಿದ್ದಾರೆ

ಕಳೆದ ೧೦ ದಿನಗಳಿಂದ ರಜನಿಕಾಂತ್ ಅವರು ತಮ್ಮ ನೂತನ ಚಿತ್ರದ ಚಿತ್ರೀಕರಣದಲ್ಲಿ ಹೈದರಾಬಾದ್ ನಲ್ಲಿ ನಿರತರಾಗಿದ್ದರು.

ಚಿತ್ರತಂಡದ ಹಲವು ಮಂದಿಗೆ ಕೊರೊನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ರಜನಿಕಾಂತ್ ಅವರು ಡಿಸೆಂಬರ್ ೨೨ ರಂದು ಅವರೂ ಕೂಡ ಸೋಂಕು ಪತ್ತೆ ಪರೀಕ್ಷೆ ಮಾಡಿಸಿಕೊಂಡಿದ್ದರು ಅವರಿಗೆ ಕೊರೋನೋ ನೆಗೆಟೀವ್ ಬಂದಿದೆ.

ಚಿತ್ರತಂಡದ ಹಲವು ಸದಸ್ಯರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಾವಿರುವ ಹೋಟೆಲ್ ನಲ್ಲಿ ಅವರು ವಿಶ್ರಾಂತಿ ಪಡೆಯುತ್ತಿದ್ದರು.

ಇಂದು ಬೆಳಗ್ಗೆ ಅಧಿಕಾರದ ತಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಲ್ಲಾ ಪರೀಕ್ಷೆಯನ್ನು ನಡೆಸಲಾಗಿದೆ ಅವರ ಆರೋಗ್ಯಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಮೂತ್ರಪಿಂಡದ ಕಸಿ ಮಾಡಿಸಿಕೊಂಡಿರುವ ರಜನಿಕಾಂತ್ ಅವರು ಆರೋಗ್ಯದ ಬಗ್ಗೆ ತೀವ್ರ ಕಾಳಜಿ ವಹಿಸಿದ್ದಾರೆ .ಅದರಲ್ಲೂ ಕೋರೋನಾ ಸಮಯದಲ್ಲಿ ಯಾರನ್ನು ಭೇಟಿ ಮಾಡದೆ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದರು.

ಮುಂದಿನ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಹೊಸ ರಾಜಕೀಯ ಪಕ್ಷವನ್ನು ಡಿಸೆಂಬರ್ ೩೧ರಂದು ಪ್ರಕಟಿಸಲಿರುವ ರಜನಿಕಾಂತ್ ಸದ್ಯ ಇರುವ ಚಿತ್ರೀಕರಣವನ್ನು ಮುಗಿಸಿ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಉದ್ದೇಶಿಸಿದ್ದಾರೆ