
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಏ.10: ಮಕ್ಕಳು ವರ್ಷಪೂರ್ತಿ ಓದಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣಗೊಂಡಿರುತ್ತೀರಿ.ಕಲಿತದನ್ನು ಮರೆಯದಂತೆ ರಜೆಯಲ್ಲಿ ಗ್ರಂಥಾಲಯ ಪುಸ್ತಕಗಳನ್ನು ಓದುತ್ತಾ ಇರಬೇಕು ಎಂದು ಶಾಲೆಯ ಮುಖ್ಯ ಗುರುಗಳಾದ ರವಿಚೇಳ್ಳಗುರ್ಕಿ ಹೇಳಿದರು.
ತಾಲ್ಲೂಕಿನ ಸಂಜೀವರಾಯನಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯ ದತ್ತ ಕಾರ್ಯಕ್ರಮ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಕ್ಕಳು ತಮ್ಮ ಪ್ರತಿಭೆಯನ್ನು ಹೊರಹಾಕಲು ಉತ್ತಮ ವೇದಿಕೆ ಎಂದು ಹೇಳಿದರು.
ಪ್ರತಿಭಾವಂತ ವಿದ್ಯಾರ್ಥಿಗಳಾದ ಹರ್ಷವರ್ಧನ್, ಭಾವನ,ಸುಷ್ಮಿತ ಹಾಗೂ ದೀಕ್ಷ ಅವರಿಗೆ ಬಹುಮಾನ ವಿತರಿಸಲಾಯಿತು.
ಶಿಕ್ಷಕರಾದ ಮುನಾವರ ಸುಲ್ತಾನ,ಬಸವರಾಜ,ದಿಲ್ಷಾದ್ ಬೇಗಂ,ಸುಮತಿ, ಸುಧಾ,ವೈಶಾಲಿ, ಶ್ವೇತಾ, ಶಶಮ್ಮ,ರಾಮಾಂಜಿನೇಯ ಮುಂತಾದವರು ಉಪಸ್ಥಿತರಿದ್ದರು.