ರಮಜಾನ: ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಸಚಿವ ಎಂ.ಬಿ. ಪಾಟೀಲ

ವಿಜಯಪುರ, ಏ. 12: ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಆವರು ರಂಜಾನ್ ಅಂಗವಾಗಿ ಗುರುವಾರ ನಗರದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.
ವಿಜಯಪುರ ನಗರದ ದಖನಿ ಶಾಹಿ ಈದ್ಗಾದಲ್ಲಿ ಬೆಳಿಗ್ಗೆ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಚಿವರು, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ಶಾಂತಿ, ಸೌಹಾರ್ದತೆಗಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಜನರೊಂದಿಗೆ ಅವರು ಪರಸ್ಪರ ಶುಭಾಷಯ ವಿನಿಮಯ ಮಾಡಿದರು. ಅಲ್ಲದೇ, ಸಹೋದರತೆ, ಸಮಾನತೆ ಹಾಗೂ ಹಾಗೂ ಸರ್ವರ ಹಿತ ಬಯಸುವ ಈ ಹಬ್ಬ ಎಲ್ಲರಿಗೂ ಒಳಿತನ್ನುಂಟು ಮಾಡಲಿ ಎಂದು ಅವರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನಾನಾ ಮುಖಂಡರು ಉಪಸ್ಥಿತರಿದ್ದರು.