ರಮೇಶರಿಂದ ಹತಾಶ ಹೇಳಿಕೆ: ಡಿಕೆಶಿ ತಿರುಗೇಟು

ಬೆಂಗಳೂರು, ಮಾ. 27- ರಾಸಲೀಲೆ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹತಾಶ ಹೇಳಿಕೆ ನೀಡುತ್ತಿದ್ದಾರೆ ಎಂದು‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಮಹಾನಾಯಕನ ಬಗ್ಗೆ ರಮೇಶ್ ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಅವರು, ಪಾಪ ರಮೇಶ್ ಜಾರಕಿಹೊಳಿ ಹತಾಶೆಯಲ್ಲಿದ್ದಾರೆ. ಅವರಿಗೆ ಏನೊ ಸಮಸ್ಯೆ ಇರರಬೇಕು. ಅವರ‌ ಹೇಳಿಕೆಗೆ‌ ತಲೆ ಕೆಡಿಸಿಕೊಳ್ಳುವುದಿಲ್ಲ. ಕಾನೂನು ಇದೆ. ಅಧಿಕಾರಿಗಳು ಇದ್ದಾರೆ. ತನಿಖೆ ನಡೆಯುತ್ತಿದೆ. ತಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.
ಇದು ರಮೇಶ್ ಜಾರಕಿಹೊಳಿ ವೈಯಕ್ತಿಕ ಸಮಸ್ಯೆ. ಇದನ್ನು ಅವರೇ ಸರಿಪಡಿಸಿಕೊಳ್ಳಬೇಕು. ಮಹಾನಾಯಕನ ಆರೋಪದ ಬಗ್ಗೆ ಉತ್ತರಿಸಿದ ಅವರು, ರಮೇಶ್ ಅವರು ಏನು ಬೇಕಾದರೂ ಮಾತನಾಡಲಿ ಇದಕ್ಕೆ ಪ್ರತಿಕ್ರಿಯಿಸಲ್ಲ.‌ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ ಕಾನೂನು ರೀತಿ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದರು.
ನಿಮ್ಮ ವಿರುದ್ದ ಯುವತಿಯ ಪೋಷಕರು ಮಾಡಿರುವ ಆರೋಪದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ತಾವು ಯುವತಿಯನ್ನು ಭೇಟಿ ಮಾಡಿಲ್ಲ. ಈ ಬಗ್ಗೆ ಬೆಳ್ಳಿಗ್ಗೆಯಷ್ಟೇ ಹೇಳಿದ್ದೇನೆ ಎಂದರು.