ರಮೇಶ್ ಜಾರಕಿಹೊಳಿಗೆ ಕೊರೊನಾ ಧೃಢಪಡಿಸಿದ ವೈದ್ಯಾಧಿಕಾರಿ

ಬೆಳಗಾವಿ ,ಏ.೫-ರಾಸಲೀಲೆ ಸಿಡಿ ಪ್ರಕರಣದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕಳೆದ ಏ. ೧ ರಂದೇ ಕೊರೊನಾ ಸೋಂಕು ತಗುಲಿದೆ.
ರಮೇಶ್ ಜಾರಕಿಹೊಳಿ ಅವರಿಗೆ ಏ. ೧ ರಂದು ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು.
ನಿನ್ನೆ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು ಎಂಬುದಾಗಿ ಗೋಕಾಕ್ ತಾಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಸ್ಪಷ್ಟಪಡಿಸಿದ್ದಾರೆ.
ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಎಂಬುದಾಗಿ ಏಪ್ರಿಲ್ ೧ ರಂದು ದೃಢಪಟ್ಟಿತ್ತು. ಇದುವರೆಗೆ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ನಿನ್ನೆ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸಿಡಿ ಪ್ರಕರಣ ಸಂಬಂಧ ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಈ ಹಿಂದೆ ಜ್ವರ ಬಂದು, ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ, ವಿಚಾರಣೆಗೆ ಹಾಜರಾಗುತ್ತಿಲ್ಲ ಎಂಬುದಾಗಿ ಎಸ್‌ಐಟಿ ಅಧಿಕಾರಿಗಳಿಗೆ ತಮ್ಮ ವಕೀಲರ ಮೂಲಕ ಪತ್ರದಲ್ಲಿ ತಿಳಿಸಿದ್ದರು.ನಂತರ ಇಂದು ಅವರಿಗೂ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರುವುದರಿಂದ ವಿಚಾರಣೆಗೆ ಗೈರಾಗಿದ್ದಾರೆ.