ರವಿಪೂಜಾರಿಗೆ ಅನಾರೋಗ್ಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಬೆಂಗಳೂರು,ಡಿ.29- ಭೂಗತ ಲೋಕದ ಪಾತಕಿ ರವಿಪೂಜಾರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದ ಜೈಲಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ
ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಎರಡು ದಶಕಗಳ ಕಾಲ ತಲೆಮರೆಸಿಕೊಂಡಿದ್ದ ರವಿಪೂಜಾರಿಯನ್ನು ಕಳೆದ ಫೆಬ್ರವರಿಯಲ್ಲಿ ನಗರ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿಗಟ್ಟಿದ್ದರು.
ಇತ್ತೀಚೆಗೆ ರವಿಪೂಜಾರಿಯಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಜೈಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು
ತಪಾಸಣೆ ನಡೆಸಿದ ವೈದ್ಯರು ರವಿಪೂಜಾರಿಗೆ ಹಾರ್ನಿಯಾ ಸಮಸ್ಯೆಯಿದೆ. ಹೆಚ್ಚಿನ ಚಿಕಿತ್ಸೆವಿದೆ ಎಂದು ಜೈಲಾಧಿಕಾರಿಗಳಿಗೆ ವೈದ್ಯರು ವರದಿ ನೀಡಿದ್ದರು.
ವೈದ್ಯರ ಸೂಚನೆ ಮೇರೆಗೆ ಇಂದು ಮಧ್ಯಾಹ್ನ ಪೊಲೀಸ್‌ ಬಂದೋಬಸ್ತಿನೊಂದಿಗೆ ವಿಕ್ಟೋರಿಯಾ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.