ರವಿ ಡಿ ಚೆನ್ನಣ್ಣನವರ್ ಸೇರಿ 12 ಮಂದಿ ಐಪಿಎಸ್ ವರ್ಗಾವಣೆ

ಬೆಂಗಳೂರು,ಜೂ.9-ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ ರವಿ ಡಿ ಚೆನ್ನಣ್ಣನವರ್ ಸೇರಿ 12 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ರವಿ ಡಿ ಚೆನ್ನಣ್ಣನವರ್ ಅವರನ್ನು ಸಿಐಡಿ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಕರಾವಳಿ ಭದ್ರತಾ ಪಡೆ ಎಸ್‌ಪಿ ಆರ್ ಚೇತನ್ ಅವರು ಮೈಸೂರು ಎಸ್‌ಪಿ ಆಗಿ ವರ್ಗಾವಣೆ ಮಾಡಲಾಗಿದೆ.
ಕೋಲಾರ ಜಿಲ್ಲೆಯ ಎಸ್‌ಪಿ ಕಾರ್ತಿಕ್ ರೆಡ್ಡಿ – ಬೆಂಗಳೂರು ಎಸ್‌ಪಿಯಾಗಿ (ವೈರ್‌ಲೆಸ್) ಸಿಐಡಿಯ ಎಸ್ ಪಿ‌ ರಾಹುಲ್ ಕುಮಾರ್ ಶಹಾಪೂರವಾಡ್ ಅವರು ತುಮಕೂರು ಎಸ್‌ಪಿಯಾಗಿ ದಾವಣಗೆರೆ ಜಿಲ್ಲೆಯ ಎಸ್‌ಪಿ ಹನುಮಂತರಾಯ ಅವರನ್ನು ಹಾವೇರಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
ಮೈಸೂರಿನ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಡಾ. ಎ.ಎನ್, ಪ್ರಕಾಶ್ ಗೌಡ ಅವರು ಬೆಂಗಳೂರು ಆಂತರಿಕ ಭದ್ರತಾ ವಿಭಾಗಕ್ಕೆ ಹಾವೇರಿ ಜಿಲ್ಲೆಯ ಎಸ್‌ಪಿ ಕೆ.ಜಿ. ದೇವರಾಜು ಅವರು ಬೆಂಗಳೂರಿನ ಸಿಐಡಿ ಎಸ್‌ಪಿಯಾಗಿ ಮೈಸೂರಿನ ಎಸ್‌ಪಿ ಸಿ.ಬಿ. ರಿಷ್ಯಂತ್ ಅವರು ದಾವಣಗೆರೆ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
ಕಲಬುರಗಿ ಜಿಲ್ಲೆಯ ಡಿಸಿಪಿ ದೆಕ್ಕ ಕಿಶೋರ್ ಬಾಬು ಅವರು ಕೋಲಾರ ಜಿಲ್ಲೆಗೆ ಎಸ್‌ಪಿಯಾಗಿ ತುಮಕೂರಿನ ಎಸ್‌ಪಿ ಡಾ. ಕೋನಾ ವಂಶಿ ಕೃಷ್ಣ ಅವರು ಬೆಂಗಳೂರು ಗ್ರಾಮಾಂತರ ಎಸ್‌ಪಿಯಾಗಿ ಆಂತರಿಕ ಭದ್ರತಾ ಇಲಾಖೆಯ ಎಸ್ಪಿ ಪ್ರದೀಪ್ ಗುಂಟಿ ಮೈಸೂರು ನಗರದ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
(ವೈರ್‌ಲೆಸ್‌) ಎಸ್‌ಪಿ ಅಡ್ಡೂರು ಶ್ರೀನಿವಾಸುಲು ಅವರು ಕಲಬುರಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಆಗಿದ್ದಾರೆ.