ರಸ್ತೆಗಳಲ್ಲಿನ ತಗ್ಗು ಮುಚ್ಚಿಸಲು ಸೂಚನೆ

ಭಾಲ್ಕಿ: ಆ.6: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಶ್ರೀ ಈಶ್ವರ್ ಖಂಡ್ರೆ ಅವರು ತಾಲೂಕು ಅನುಷ್ಟಾನ ಅಧಿಕಾರಿಗಳ ಜತೆಗೆ ತುರ್ತು ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಮಳೆಗೆ ಗಾಮೀಣ ಭಾಗದ ರಸ್ತೆ ಸೇರಿ ಮುಖ್ಯ ರಸ್ತೆಗಳಲ್ಲಿ ತಗ್ಗು ಗುಂಡಿಗಳು ತೇಲಿವೆ. ಜನ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಕೂಡಲೇ ಲೋಕೋಪಯೋಗಿ, ಪಂಚಾಯತ್ ರಾಜ್, ಪ್ರಧಾನ ಮಂತ್ರಿ ಸಡಕ್ ಯೋಜನೆಯಡಿ ತಮ್ಮ ವ್ಯಾಪ್ತಿಯ ರಸ್ತೆಗಳಲ್ಲಿ ತಲೆಯೆತ್ತಿರುವ ತಗ್ಗುಗಳನ್ನು ತಕ್ಷಣಕ್ಕೆ ಮುಚ್ಚಿಸಿ ಜನ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡುವುದರ ಜತೆಗೆ ತಾಲೂಕಿನಲ್ಲಿ ಉತ್ತಮ ಮಳೆ ಆಗಿದ್ದು ಎಲ್ಲೆಡೆ ಹೆಚ್ಚು ಗಿಡಗಳನ್ನು ನೆಡಲು ಆದ್ಯತೆ ನೀಡಬೇಕು. ಮುಂಬರುವ ಕೆಲ ದಿನಗಳಲ್ಲಿ ಗ್ರಾಮೀಣ, ಮುಖ್ಯ ರಸ್ತೆ, ಪಂಚಾಯಿತಿ ವ್ಯಾಪ್ತಿಯ ಕೆಲ ರಸ್ತೆಗಳ ಬದಿಯಲ್ಲಿ ಒಂದೇ ದಿನ 5 ಸಾವಿರ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದ್ದು, ಅರಣ್ಯ ಅಧಿಕಾರಿಗಳು ಗಿಡ ನೆಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.