ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ


ಬ್ಯಾಡಗಿ,ಮಾ.2: ಪಟ್ಟಣದಲ್ಲಿ ಅತಿಕ್ರಮಣಗೊಂಡಿರುವ ರಸ್ತೆ ತೆರವುಗೊಳಿಸುವಂತೆ ಆಗ್ರಹಿಸಿ ಶುಕ್ರವಾರ ಹಳೆಯ ಪುರಸಭೆಯ ಎದುರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಪ್ರತಿಭಟನೆಯ ಸ್ಥಳದ ಪಕ್ಕದಲ್ಲೆ ಅಡುಗೆ ಮಾಡಿ ಊಟ ಸವಿಯುವ ಮೂಲಕ ರಸ್ತೆ ಅಗಲೀಕರಣಗೊಳಿಸುವಂತೆ ಪ್ರತಿಭಟನೆ ನಡೆಸಿದರು.
ಪಟ್ಟಣದ ಕಿರಿದಾದ ಮುಖ್ಯರಸ್ತೆಯ ಅಗಲೀಕರಣಕ್ಕೆ ಒತ್ತಾಯಿಸಿ ಕಳೆದ ಮಂಗಳವಾರದಿಂದ ರಸ್ತೆ ಅಗಲೀಕರಣ ಹೋರಾಟ ಸಮಿತಿ ಅಧ್ಯಕ್ಷ ನ್ಯಾಯವಾದಿ ಸುರೇಶ ಚಲುವಾದಿ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈಗಾಗಲೇ ಈ ರಸ್ತೆ ಅಗಲೀಕರಣ ಹೋರಾಟಕ್ಕೆ ತಾಲೂಕಾ ನ್ಯಾಯವಾದಿ ಸಂಘವು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಒಂದು ದಿನ ಹೋರಾಟದಲ್ಲಿ ಭಾಗಿಯಾಗಿದೆ. ಇದರೊಂದಿಗೆ ಪಟ್ಟಣದ ಅನೇಕ ಸಂಘಸಂಸ್ಥೆಗಳು, ಸಾರ್ವಜನಿಕರು ಸಹ ಪ್ರತಿಭಟನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.